More

    ಮೂರ್ತಿ ಪ್ರತಿಷ್ಠಾಪನೆಗೆ ಒಪ್ಪಿಗೆ

    ಬೆಳಗಾವಿ: ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರ ಹಲವು ಷರತ್ತು ವಿಧಿಸುವ ಮೂಲಕ ಚತುರ್ಥಿ ಆಚರಣೆಗೆ ಅವಕಾಶ ನೀಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಗರಿಷ್ಠ 4 ಅಡಿ ಹಾಗೂ ಮನೆಯಲ್ಲಿ 2 ಅಡಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಿದೆ.

    ಕರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಮೊದಲು ಸರ್ಕಾರ ಸಂಪೂರ್ಣವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿತ್ತು. ಸರ್ಕಾರದ ನಿರ್ಧಾರಕ್ಕೆ ರಾಜ್ಯಾಧ್ಯಂತ ವಿರೋಧವ್ಯಕ್ತವಾಗಿತ್ತು. ಪ್ರತಿಭಟನೆಗೆ ಮಣಿದ ಸರ್ಕಾರ ಷರತ್ತು ವಿಧಿಸಿ ಪರಿಷ್ಕೃತ ಆದೇಶ ಹೊರಡಿಸಿದೆ.

    ದೇವಸ್ಥಾನ, ಮನೆ, ಸರ್ಕಾರಿ ಮತ್ತು ಖಾಸಗಿ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸಬಹುದು. ಮನೆಯೊಳಗೆ 2 ಅಡಿ, ಬಯಲು ಪ್ರದೇಶದಲ್ಲಿ 4 ಅಡಿ ಎತ್ತರದ ಮೂರ್ತಿ ಪ್ರತಿಷ್ಠಾಪಿಸಬೇಕು. ಸಮಾರಂಭದಲ್ಲಿ 20ಕ್ಕಿಂತ ಅಧಿಕ ಜನ ಸೇರಬಾರದು. ಸಾಂಸ್ಕೃತಿಕ, ಮನರಂಜನೆ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆಗೆ ಸ್ಥಳೀಯ ಸಂಸ್ಥೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು.

    ಒಂದು ವಾರ್ಡ್‌ಗೆ, ಒಂದು ಗ್ರಾಮಕ್ಕೆ ಒಂದೇ ಗಣೇಶ ಪ್ರತಿಷ್ಠಾಪನೆಗೆ ಪ್ರೋತ್ಸಾಹಿಸಬೇಕು. ಮೂರ್ತಿ ತರುವಾಗ ಅಥವಾ ವಿಸರ್ಜಿಸುವಾಗ ಮೆರವಣಿಗೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಮನೆಯಲ್ಲೇ ವಿಸರ್ಜಿಸಬೇಕು ಎಂದು ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts