More

    ಜಿಟಿ-ಜಿಟಿ ಮಳೆಗೆ ಕವಲೂರು ಗ್ರಾಮಸ್ಥರು ಸುಸ್ತು

    ಅಳವಂಡಿ: ಕಳೆದ ಕೆಲ ದಿನಗಳಿಂದ ವಲಯ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಸಾರ್ವಜನಿಕರ ಜೀವನಕ್ಕೆ ಅಡಚಣೆ ಉಂಟಾಗಿದೆ.

    ಕವಲೂರು ಗ್ರಾಮದಲ್ಲಿ ಕಳೆದ ಕೆಲ ತಿಂಗಳ ಹಿಂದೆ ಕೆರೆ ಹೂಳೆತ್ತುವ ಸಂದರ್ಭದಲ್ಲಿ ಬಸ್ ನಿಲ್ದಾಣ, ಪಶು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಬಾಲಕಿಯರ ಶಾಲೆ, ಗುಡಗೇರಿ ಸಂಪರ್ಕ ರಸ್ತೆಯಿಂದ ಬನ್ನಿಕೊಪ್ಪ ರಸ್ತೆವರೆಗಿನ ರಿಂಗ್ ರಸ್ತೆಗೆ ಮರಮ್ (ಗರಸು ಮಣ್ಣು) ಹಾಕಿ ತಗ್ಗು ದಿನ್ನೆಗಳನ್ನು ಮುಚ್ಚಿ ಸಂಚಾರಕ್ಕೆ ಅನೂಕೂಲ ಮಾಡಿಕೊಡಲಾಗಿತ್ತು.

    ಕಳೆದ ಕೆಲ ದಿನದಿಂದ ಸುರಿಯುತ್ತಿರುವ ಮಳೆ ರಸ್ತೆಯನ್ನು ಹಾಳು ಮಾಡಿದ್ದು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ರಸ್ತೆ ಕೆಸರುಮಯವಾಗಿದೆ. ಇದರಿಂದ ಶಾಲೆಗೆ ತೆರಳುವ ಮಕ್ಕಳು, ಆಸ್ಪತ್ರೆಗೆ ಹೋಗುವ ರೋಗಿಗಳ ಸಂಚಾರಕ್ಕೆ ತೊಂದರೆಯಾಗಿದೆ. ದ್ವಿಚಕ್ರ ವಾಹನ ಸವಾರರು ಬಿದ್ದು, ಗಾಯಗೊಳ್ಳುತ್ತಿದ್ದಾರೆ. ರಿಂಗ್ ರಸ್ತೆಯನ್ನು ಸಿಸಿ ರಸ್ತೆಯನ್ನಾಗಿ ಮಾಡಿ ಸಾರ್ವಜನಿಕರಿಗೆ ಅನೂಕೂಲ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

    ಮಳೆಯಾದರೆ ರಿಂಗ್ ರಸ್ತೆ ಕೆಸರುಮಯವಾಗಿ ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಶಾಲಾ ಮಕ್ಕಳು, ಆಸ್ಪತ್ರೆಗೆ ತೆರಳುವವರಿಗೆ ಹಾಗೂ ವೃದ್ಧರಿಗೆ ತುಂಬಾ ತೊಂದರೆಯಾಗಿದ್ದು, ಈ ರಸ್ತೆಯನ್ನು ಸಿಸಿ ರಸ್ತೆಯನ್ನಾಗಿ ಮಾಡಬೇಕಿದೆ.
    ನಾಗರಾಜ ಕಗ್ಗಲ್ಲ, ಗ್ರಾಮಸ್ಥ. ಕವಲೂರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts