More

  ಕೇತ್ರದಲ್ಲಿ ಮೂಲಸೌಕರ್ಯ ಕಲ್ಪಿಸಲು ಆದ್ಯತೆ

  ವಿಜಯವಾಣಿ ಸುದ್ದಿಜಾಲ ನೆಲಮಂಗಲ
  ಕ್ಷೇತ್ರದಾದ್ಯಂತ ಜನಸಾಮಾನ್ಯರಿಗೆ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
  ನಗರಸಭೆ ವ್ಯಾಪ್ತಿಯ ಅರಿಶಿಣಕುಂಟೆಯ ನಗರಸಭೆ ಕಾರ್ಯಾಲಯದ ಆವರಣದಲ್ಲಿ ನಗರಸಭೆಯಿಂದ ಆಯೋಜಿಸಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು.
  ನಗರದಲ್ಲಿ 2ನೇ ಬಾರಿಗೆ ಕುಂದು ಕೊರತೆ ಆಯೋಜಿಸಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಅಧಿಕಾರಿಗಳು ಕೂಡ ಸಮಸ್ಯೆ ಬಗ್ಗೆ ಹರಿಸುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು. ನಗರದಾದ್ಯಂತ ಕಾವೇರಿ ಕುಡಿಯುವ ನೀರು, ಒಳಚರಂಡಿ ಸೌಲಭ್ಯ ಕಲ್ಪಿಸಲು ಸಿಎಂ, ಡಿಸಿಎಂ, ನಗರಾಭಿವೃದ್ಧಿ ಸಚಿವರ ಜತೆ ಚರ್ಚಿಸಿದ್ದು, ಸಕಾರಾತ್ಮಕವಾಗಿ ಸ್ಪಂದನೆ ದೊರೆತಿದ್ದು, ಮುಂದಿನ ದಿನಗಳಲ್ಲಿ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ ಎಂದರು. ಸಭೆಯಲ್ಲಿ ನೀಡಿದ ಅಹವಾಲುಗಳನ್ನು ಅಧಿಕಾರಿಗಳ ಮೂಲಕ ಪಟ್ಟಿ ಮಾಡಿಸಿ, ಹಂತ ಹಂತವಾಗಿ ಬಗೆ ಹರಿಸುವ ಪ್ರಯತ್ನ ಮಾಡಲಾಗುತ್ತಿದೆ. ಬೆಂಗಳೂರಿಗೆ ಸಮೀಪವಿರುವ ನೆಲಮಂಗಲ ನಗರವನ್ನು ಅಭಿವೃದ್ಧಿಯ ನಗರವಾಗಿ ನಿರ್ಮಾಣ ಮಾಡಲು ಪಣತೊಟ್ಟಿದ್ದೇನೆ ಎಂದರು.
  ನಗರಸಭೆ ಅಧ್ಯಕ್ಷೆ ಲತಾಹೇಮಂತ್‌ಕುಮಾರ್ ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. 250 ಕಡೆ ವಿದ್ಯುತ್ ದೀಪಗಳ ಅಳವಡಿಕೆ ಕುರಿತು ಟೆಂಟರ್ ಪ್ರಕ್ರಿಯೆ ನಡೆಯುತ್ತಿದೆ. ಸಮಸ್ಯೆಗಳನ್ನು ಅಧಿಕಾರಿಗಳು ಪಟ್ಟಿ ಮಾಡಿಕೊಂಡು ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
  ನಗರಸಭೆ ಸದಸ್ಯರಾದ ಜಿ.ಆನಂದ್, ಲೋಲಾಕ್ಷಿ ಗಂಗಾಧರ್, ಆರಕ್ಷಕ ನಿರೀಕ್ಷಕ ಶಶಿಧರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಎಂ.ವಾಣಿ, ಸಿಡಿಪಿಒ ನಾಗೇಶ್, ನೆ.ಯೋ.ಪ್ರಾಧಿಕಾರ ಮಾಜಿ ಅಧ್ಯಕ್ಷ ಹೇಮಂತ್‌ಕುಮಾರ್, ಬಿಎಂಟಿಸಿ ಮಾಜಿ ನಿರ್ದೇಶಕ ಮಿಲ್ಟ್ರೀಮೂರ್ತಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಪುರಸಭೆ ಮಾಜಿ ಅಧ್ಯಕ್ಷ ಎಂ.ನಾರಾಯಣ್‌ಗೌಡ, ಗ್ರಾಪಂ ಮಾಜಿ ಅಧ್ಯಕ್ಷರಾದ ಆರ್.ಚಂದ್ರಕುಮಾರ್, ಲಕ್ಷ್ಮೀನಾರಾಯಣ್, ಎಚ್.ರಾಜಣ್ಣ, ಮಾಜಿ ಉಪಾಧ್ಯಕ್ಷ ವೆಂಕಟರಾಮು, ಮಾಜಿ ಸದಸ್ಯರಾದ ಭಿನ್ನಮಂಗಲ ವಾಸು, ಲಕ್ಷ್ಮೀಕಾಂತ್, ಹನುಮಂತಮ್ಮ, ನಾಗರತ್ನಮ್ಮ, ಮುನಿಯಪ್ಪ ಮತ್ತಿತರರು ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts