More

    ಮತದಾರರ ಪಟ್ಟಿ ಪ್ರಕಟ; ರಾಜಕೀಯ ಪಕ್ಷಗಳೊಂದಿಗೆ ಸಿಇಒ ಸಭೆ

    ಬೆಂಗಳೂರು: ರಾಜ್ಯದ ಅಂತಿಮ ಮತದಾರರ ಪಟ್ಟಿ ಕುರಿತು ರಾಜಕೀಯ ಪಕ್ಷಗಳು ಕೂಲಂಕುಶವಾಗಿ ಪರಿಶೀಲಿಸಿ ಸಲಹೆಗಳಿದ್ದಲ್ಲಿ ಆಯೋಗಕ್ಕೆ ಲಿಖಿತವಾಗಿ ಪತ್ರ ಬರೆದು ಗಮನ ಸೆಳೆಯಬಹುದು ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದರು.

    ಅಂತಿಮ ಮತದಾರರ ಪಟ್ಟಿ 2024 ಪ್ರಕಟಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
    ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಚುನಾವಣೆ ಸಂದರ್ಭದಲ್ಲಿ ಪಾಲಿಸಬೇಕಾದ ನೀತಿ-ನಿಯಮಗಳ ಕುರಿತು ಆಯೋಗ ಪ್ರಕಟಿಸಿರುವ ಚುನಾವಣಾ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು, ಪ್ರಾಶಸ್ತ್ಯ ಮತದಾನ ಮಾಡುವ ಕುರಿತು ಅನುಮಾನಗಳನ್ನು ಬಗೆಹರಿಸುವಲ್ಲಿ ಅವಶ್ಯಕ ಜಾಗೃತಿ ಸಂದೇಶವುಳ್ಳ ಬಿತ್ತಿಚಿತ್ರ ಹಾಗೂ ಕಿರುಚಿತ್ರಗಳನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

    ಅಪರ ಮುಖ್ಯ ಚುನಾವಣಾಧಿಕಾರಿಗಳಾದ ವೆಂಕಟೇಶ್ ಕುಮಾರ್ ಹಾಗೂ ಕೂರ್ಮ ರಾವ್, ರಾಷ್ಟ್ರೀಯ ಪಕ್ಷಗಳಾದ ಆಮ್ ಆದ್ಮಿ ಪಕ್ಷ, ಬಹುಜನ ಸಮಾಜ ಪಕ್ಷ, ಭಾರತೀಯ ಜನತಾ ಪಕ್ಷ, ಕಮ್ಯುನಿಸ್ಟ್ ಪಾರ್ಟಿ ಆ್ ಇಂಡಿಯಾ (ಮಾರ್ಕ್ಸಿಸ್ಟ್), ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ನ್ಯಾಷನಲ್ ಪೀಪಲ್ಸ್ ಪಾರ್ಟಿ ಹಾಗೂ ರಾಜ್ಯಮಟ್ಟದ ಪಕ್ಷ ಜನತಾದಳ (ಸೆಲ್ಯುಲರ್) ಪಕ್ಷದ ಪ್ರತಿನಿಧಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts