More

    ಪಿಯುಸಿ ಫಲಿತಾಂಶ ಉತ್ತಮಗೊಳಿಸಿ: ಡಿಸಿ ಡಾ.ಎಚ್.ಎನ್.ಗೋಪಾಲಕೃಷ್ಣ ಸೂಚನೆ

    ಮಂಡ್ಯ: ಕಳೆದ ವರ್ಷ ದ್ವಿತೀಯ ಪಿಯುಸಿಯಲ್ಲಿ ಜಿಲ್ಲೆ ಕಡಿಮೆ ಫಲಿತಾಂಶ ಪಡೆದಿತ್ತು. ಆದರೆ ಈ ಬಾರಿ ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಸೂಚನೆ ನೀಡಿದರು.
    ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಜಿಲ್ಲೆಯ ಪಿಯುಸಿ ಕಾಲೇಜಿನ ಪ್ರಾಂಶುಪಾಲರೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ವರ್ಷ ಜಿಲ್ಲೆ ಶೇ.59ರಷ್ಟು ಫಲಿತಾಂಶ ಪಡೆಯಲ್ಲಷ್ಟೇ ಸಾಧ್ಯವಾಗಿತ್ತು. ಈ ವರ್ಷದ ಫಲಿತಾಂಶವು ಜಿಲ್ಲೆಗೆ ಕೀರ್ತಿ ತರುವಂತಾಗಬೇಕು ಎಂದರು.
    ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ತೇರ್ಗಡೆಯಾಗಿ ಜಿಲ್ಲೆಗೆ ಉತ್ತಮ ಸ್ಥಾನ ದೊರಕುವಂತೆ ಸಜ್ಜುಗೊಳಿಸಿ. ಫಲಿತಾಂಶವನ್ನು ಉತ್ತಮಪಡಿಸಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿಶೇಷ ತರಗತಿ, ಗುಂಪು ಅಧ್ಯಯನ, ಕಡಿಮೆ ಅಂಕ ಪಡೆದಿರುವ ಮಕ್ಕಳಿಗೆ ಪುನರಾವರ್ತನೆ, ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವುದು ಹೇಗೆಂದು ವಿವಿಧ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾಡಿಸಿ. ಜಿಲ್ಲಾ ಮಟ್ಟದ ಅಧಿಕಾರಿಗಳು, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಸಹಕಾರದೊಂದಿಗೆ ಕೆಲಸ ನಿರ್ವಹಿಸಿ ಎಂದರು.
    ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ, ಡಿಡಿಪಿಯು ಎಸ್.ಉಮೇಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts