More

    ಪಿಯುಸಿ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ; ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ

    ಹಾವೇರಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮಾ.9ರಿಂದ 29ರವರೆಗೆ ಜಿಲ್ಲೆಯ 26 ಕೇಂದ್ರಗಳಲ್ಲಿ ಜರುಗಲಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿರ್ಭಂದಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಘುನಂದನ ಮೂರ್ತಿ ಆದೇಶ ಹೊರಡಿಸಿದ್ದಾರೆ.
    ಈ ನಿರ್ಭಂದಿತ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಹಾಗೂ ವ್ಯಕ್ತಿಗಳ ಗುಂಪುಗಳ ಪ್ರವೇಶ ನಿಷೇಧಿಸಲಾಗಿದೆ. ಈ ಪ್ರದೇಶದಲ್ಲಿ ಬರುವ ಝರಾಕ್ಸ್ ಸೆಂಟರ್ ಮತ್ತು ಟೈಪಿಂಗ್ ಸೆಂಟರ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಮೊಬೈಲ್ ಫೋನ್ ನಿಷೇಧಿಸಲಾಗಿದೆ.

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ
    ಹಾವೇರಿ: ಮಾ.9ರಿಂದ 29ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
    ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಬೇರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ಶಿಕ್ಷಣ ಇಲಾಖೆಯ ಕೋರಿಕೆಯ ಮೇರೆಗೆ ಈ ವ್ಯವಸ್ಥೆ ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts