More

    ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ; ಹೇಗಿರಲಿದೆ ವ್ಯವಸ್ಥೆ?

    ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಶುರುವಾಗಲಿದ್ದು ವಿದ್ಯಾರ್ಥಿ ವಿದ್ಯಾರ್ಥಿನಿಯರು ಅಗ್ನಿಪರೀಕ್ಷೆಗೆ ಸಿದ್ಧವಾಗಿದ್ದಾರೆ. ಈ ಬಾರಿಯೂ ಎಂದಿನಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಗುರುವಾರದಿಂದ ಪ್ರಾರಂಭವಾಗುವ ವಾರ್ಷಿಕ ಪರೀಕ್ಷೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ.

    ದ್ವಿತೀಯ ಪಿಯುಸಿ ಪಿಯುಸಿ ಪರೀಕ್ಷೆ ಇಂದಿನಿಂದ (ಮಾ.9) ಶುರುವಾಗಿ ಮಾರ್ಚ್ 29ರವರೆಗೆ ನಡೆಯಲಿದೆ. ರಾಜ್ಯದ 5,716 ಕಾಲೇಜುಗಳಿಂದ 7.27 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾಜ್ಯಾದ್ಯಂತ ಪರೀಕ್ಷೆಗೆ ಹಾಜರಾಗಲು ಈ ಬಾರಿ ಸಿದ್ಧರಾಗಿದ್ದಾರೆ.

    ಇದನ್ನೂ ಓದಿ: 9 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

    ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ (ಪಿಯು ಬೋರ್ಡ್) ಪ್ರತಿ ವರ್ಷ ನಡೆಸುತ್ತದೆ. ಈ ವರ್ಷ ರಾಜ್ಯ ಸರ್ಕಾರವು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದ್ದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯನ್ನು ರಚಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ECSC ಬೋರ್ಡ್) ಮತ್ತು PU ಬೋರ್ಡ್ ಅನ್ನು ವಿಲೀನಗೊಳಿಸಿತ್ತು.

    “ನಕಲು ಅಥವಾ ಯಾವುದೇ ರೀತಿಯ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಕೊಠಡಿ ಪರಿಚಾರಕರು, ಗುಪ್ತಚರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪ್ರತ್ಯೇಕ ಮಾರ್ಗಸೂಚಿಗಳನ್ನು ನೀಡಲಾಗಿದೆ” ಎಂದು ಕರ್ನಾಟಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಈ ಸಂದರ್ಭ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಸಚಿವರು ಹುರಿದುಂಬಿಸಿದ್ದು ಹೀಗೆ:

    ಇದನ್ನೂ ಓದಿ: ಪಿಯುಸಿ ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ; ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ

    ಪರೀಕ್ಷೆಯ ಸುರಕ್ಷತೆ ಮತ್ತು ಭದ್ರತೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ತಂಡ ಹಾಗೂ ತಾಲೂಕು ಮಟ್ಟದಲ್ಲಿ ಪ್ರತ್ಯೇಕ ತಂಡ ರಚಿಸಲಾಗಿದೆ.

    ನಕಲು ತಡೆಯಲು ಜಾಗೃತ ದಳವನ್ನು ನೇಮಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಬಳಿ ಸಿಸಿಟಿವಿ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಬಳಿ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಾ.9ರಿಂದ 29ರವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕೆಎಸ್​ಆಎರ್​ಟಿಸಿ ಸಂಸ್ಥೆ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಇದನ್ನೂ ಓದಿ: ಪಿಯುಸಿ ಮಕ್ಕಳಿಗೆ ಈ ವರ್ಷವೂ ಪರೀಕ್ಷಾ ಕೇಂದ್ರದ ತನಕ ಉಚಿತ ಪ್ರಯಾಣ ಘೋಷಿಸಿದ ಕೆಎಸ್​ಆರ್​ಟಿಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts