More

  ರೈಲಿನಡಿ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವು

  ಬಳ್ಳಾರಿ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್​ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿರುವ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ಮಂಗಳವಾರ ನಡೆದಿದೆ.

  ಇದನ್ನು ಓದಿ: ದ್ವಿತೀಯ ಪಿಯು ಪೂರಕ ಪರೀಕ್ಷೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ

  ಶ್ರೇಯಾ ಮೃತ ವಿದ್ಯಾರ್ಥಿನಿ. ಈಕೆ ಹೊಸಪೇಟೆ ನಗರದ ಅನಂತಶಯನ ಗುಡಿ ಬಳಿಯ ಕೆ.ಎಸ್.ಪಿ.ಎನ್. ಕಾಲೇಜಿನ ಓದುತ್ತಿದ್ದಳು. ಫಲಿತಾಂಶ ನೋಡಲು ಕಾಲೇಜಿಗೆ ತೆರಳಿದ್ದ ಶ್ರೇಯಾ, ಫೇಲ್​ ಆಗಿದ್ದಕ್ಕೆ ಮನನೊಂದು ಚಲಿಸುತ್ತಿದ್ದ ರೈಲಿನಡಿ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು.

  ಆಕೆಯೊಂದಿಗಿದ್ದ ಗೆಳತಿ ರೂಪಾ ತಡೆಯುವ ಪ್ರಯತ್ನ ಮಾಡಿದ್ದಾದರೂ, ಹಳಿ ಮೇಲೆ ಬಿದ್ದ ಪರಿಣಾಮ ಶ್ರೇಯಾ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ರೂಪಾ ಕೈಗೂ ಏಟು ಬಿದ್ದಿತ್ತು.

  ಇದನ್ನೂ ಓದಿ: ಹಸಿ ಮೀನು ತಿಂದು ಗಂಟಲು ಕೆರೆತವೆಂದು ಆಸ್ಪತ್ರೆಗೆ ಹೋದ ಯುವತಿಗೆ ಕಾದಿತ್ತು ಭಾರಿ ಶಾಕ್​!

  ರೈಲ್ವೆ ಹಳಿಯ ಮೇಲೆ ಬಿದ್ದಿದ್ದ ವಿದ್ಯಾರ್ಥಿನಿಯನ್ನು ನೋಡಿದ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ರೂಪಾ ಸಹ ಆಸ್ಪತ್ರೆಗೆ ದಾಖಲಾಗಿದ್ದಳು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶ್ರೇಯಾ ಮೃತಪಟ್ಟಿದ್ದಾಳೆ. ಇಬ್ಬರು ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದರು. ಈ ಸಂಬಂಧ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

  ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್: ಕಳೆನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts