21 C
Bengaluru
Wednesday, January 22, 2020

ಉಡುಪಿಗೆ ಅಗ್ರಸ್ಥಾನ, ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟ ದಕ್ಷಿಣ ಕನ್ನಡ

Latest News

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಹೊತ್ತು 6 ಕಿ.ಮೀ ಸಾಗಿ ಆಸ್ಪತ್ರೆಗೆ ದಾಖಲಿಸಿದ ಯೋಧರ ತಂಡ

ಬಿಜಾಪುರ್​: ಸಿಆರ್​ಪಿಎಫ್​ ಯೋಧರ ತಂಡವೊಂದು ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಮಂಚದ ಮೇಲೆ ಹಾಕಿಕೊಂಡು ಸುಮಾರು 6 ಕಿ.ಮೀ ದೂರದ ಆಸ್ಪ್ರತೆಗೆ ನೆಡದುಕೊಂಡೇ...

ನೇಪಾಳ ದುರಂತ| ಮೂವರು ಮಕ್ಕಳ ಹುಟ್ಟುಹಬ್ಬಕ್ಕೆ ತೆರಳಿದ್ದ ಕೇರಳ ಕುಟುಂಬ ಮರಳಿದ್ದು ಶವವಾಗಿ

ಕೊಚ್ಚಿ: ನೇಪಾಳ ಪ್ರವಾಸಕ್ಕೆಂದು ತೆರಳಿ ಹೋಟೆಲ್​ವೊಂದರಲ್ಲಿ ದುರಂತ ಸಾವಿಗೀಡಾದ ಕೇರಳ ಮೂಲ ಕುಟುಂಬದ ಕರುಣಾಜನಕ ಕತೆಯಿದು. ಮೃತ ತಿರುವನಂತಪುರ ನಿವಾಸಿ ಪ್ರವೀಣ್​ ಮತ್ತು ಸರಣ್ಯ...

ಸರ್ಕಾರಿ ಆಸ್ಪತ್ರೆಗಳಲ್ಲಿರುವ ಉಪಕರಣಗಳಿಗೆ ಉಸಿರು ತುಂಬಿ!

ದಾವಣಗೆರೆ: ರಾಜ್ಯದಲ್ಲಿ ಸರಿಸುಮಾರು 3 ಸಾವಿರ ಸರ್ಕಾರಿ ಆಸ್ಪತ್ರೆಗಳಿದ್ದು, ನಿರ್ವಹಣೆ ಕೊರತೆ ಕಾರಣ ಬಹುತೇಕ ಆಸ್ಪತ್ರೆಗಳಲ್ಲಿನ ಉಪಕರಣಗಳು ಜೀವ ಕಳೆದುಕೊಂಡಿವೆ. ಹೀಗಾಗಿ ಸಾವಿರಾರು ರೋಗಿಗಳು...

ಕುಮಾರಸ್ವಾಮಿ ದುಷ್ಕರ್ಮಿಗಳಿಗೆ ಬೆಂಬಲ ಕೊಡುತ್ತಿದ್ದಾರೆ ಎನ್ನುವ ಭಾವನೆ ಮೂಡುತ್ತಿದೆ: ಸಚಿವ ಕೆ.ಎಸ್. ಈಶ್ವರಪ್ಪ ಕಿಡಿ

ಹಾಸನ: ಮಂಗಳೂರು ಬಾಂಬ್ ಪತ್ತೆ ಪ್ರಕರಣದ ಬಗ್ಗೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸಿರುವ ಅನುಮಾನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಗ್ರಾಮೀಣಾಭಿವೃದ್ಧಿ ಸಚಿವ...

ಮಂಗಳೂರು ಬಾಂಬ್​ ಪತ್ತೆ ಪ್ರಕರಣ: ಪೊಲೀಸ್​ ವಿಚಾರಣೆ ವೇಳೆ ಆರೋಪಿ ಆದಿತ್ಯರಾವ್ ಹೇಳಿದ್ದೇನು?​

ಬೆಂಗಳೂರು: ಸಮಾಜದ ವ್ಯವಸ್ಥೆಗೆ ಬೇಸತ್ತು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದಾಗಿ ಆರೋಪಿ ಆದಿತ್ಯರಾವ್​ ಪೊಲೀಸ್​ ವಿಚಾರಣೆ ವೇಳೆ ಬಹಿರಂಗಪಡಿಸಿದ್ದಾನೆ. ವಿಐಪಿ ಗೆಸ್ಟ್ ಹೌಸ್​ನಲ್ಲಿ...

ಪ್ರತಿವರ್ಷವೂ ಪ.ಪೂ. ಪರೀಕ್ಷೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತದೆ. ಇವೆರಡರಲ್ಲಿ ಯಾವುದಾದರೊಂದು ಜಿಲ್ಲೆಗೆ ಅಗ್ರಸ್ಥಾನ ಕಟ್ಟಿಟ್ಟ ಬುತ್ತಿ. ಪ್ರತಿವರ್ಷ ಅಥವಾ ಕೆಲವು ವರ್ಷಗಳ ಅಂತರದಲ್ಲಿ ಎರಡೂ ಜಿಲ್ಲೆಗಳ ನಡುವೆ ಅದಲು ಬದಲಾಗುತ್ತದೆ, ಅಷ್ಟೇ. ಈ ಬಾರಿಯೂ ಅದೇ ಪುನರಾವರ್ತನೆಯಾಗಿದೆ. ಕಳೆದ ಬಾರಿ ಪ್ರಥಮ ಸ್ಥಾನ ಪಡೆದಿದ್ದ ದಕ್ಷಿಣ ಕನ್ನಡ ಜಿಲ್ಲೆ ಈ ಬಾರಿ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿದೆ, ಉಡುಪಿ ಅಗ್ರಸ್ಥಾನಕ್ಕೇರಿದೆ.

ಉಡುಪಿಯಲ್ಲಿ ಮೂರು ಬಾರಿ ಪೂರ್ವಪರೀಕ್ಷೆ

ಉಡುಪಿ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಮತ್ತೆ ನಂಬರ್ 1 ಸ್ಥಾನಕ್ಕೇರಿದ ಉಡುಪಿ ಜಿಲ್ಲೆ ಈ ಬಾರಿ ಮೂರು ಬಾರಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಸುವುದರ ಸಹಿತ ಹಲವು ವಿಚಾರಗಳಲ್ಲಿ ಗಮನ ಹರಿಸುವ ಮೂಲಕ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿತ್ತು ಎಂದು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಜೋಷಿ ‘ವಿಜಯವಾಣಿ’ಗೆ ತಿಳಿಸಿದ್ದಾರೆ.

ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ತರಗತಿ ಆಯೋಜಿಸಲಾಗಿತ್ತು. ಪೋಷಕರನ್ನು ಕರೆಸಿಕೊಂಡು ಮಕ್ಕಳ ಕಲಿಕೆಯಲ್ಲಿ ನೆರವಾಗುವ ಬಗ್ಗೆ ಕೌನ್ಸೆಲಿಂಗ್ ನಡೆಸಲಾಗಿದೆ. 18 ವಿಷಯಗಳ ಉಪನ್ಯಾಸಕರ ಫೋರಂನವರು ವಿದ್ಯಾರ್ಥಿಗಳ ಗರಿಷ್ಠ ಅಂಕ, ಉತ್ತಮ ಫಲಿತಾಂಶಕ್ಕಾಗಿ ವಿವಿಧ ಯೋಜನೆಗಳನ್ನು ಸಿದ್ಧಪಡಿಸಿಕೊಂಡಿದ್ದರು. ಪ್ರಾಂಶುಪಾಲರ ಅಸೋಸಿಯೇಶನ್ ಸೂಕ್ತ ಯೋಜನೆಗಳನ್ನು ರೂಪಿಸಿಕೊಂಡಿತ್ತು. ಮೂರು ಬಾರಿ ಪೂರ್ವಸಿದ್ಧತಾ ಪರೀಕ್ಷೆ ನಡೆಸಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲಾಗಿತ್ತು. ಇದೆಲ್ಲದರ ಪರಿಣಾಮ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಈ ಬಾರಿ ಉಡುಪಿ ಜಿಲ್ಲೆ ಶೇ.92.20 ಫಲಿತಾಂಶ ಬಂದಿದೆ. ಆ ಮೂಲಕ ದ.ಕ. ಜಿಲ್ಲೆಯನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಿದೆ.

ಉಡುಪಿ ಜಿಲ್ಲೆಯ 3 ಸರ್ಕಾರಿ ಕಾಲೇಜು ಸೇರಿದಂತೆ ಒಟ್ಟು 10 ಪಿಯು ಕಾಲೇಜುಗಳು ಶೇ.100 ಫಲಿತಾಂಶ ದಾಖಲಿಸಿದೆ.

ಸರ್ಕಾರಿ ಪಪೂ ಕಾಲೇಜು ಮುದರಂಗಡಿ, ಸರ್ಕಾರಿ ಪಪೂ ಕಾಲೇಜು ಪಲಿಮಾರು, ಸರ್ಕಾರಿ ಪಪೂ ಕಾಲೇಜು ಕುಕ್ಕುಜೆ, ಪೂರ್ಣಪ್ರಜ್ಞ ಪಪೂ ಕಾಲೇಜು, ಆಲ್ ಇಹ್ಸಾನ್ ಪಪೂ ಕಾಲೇಜು ಮೂಳೂರು, ಕ್ರೈಸ್ಟ್‌ಕಿಂಗ್ ಪಪೂ ಕಾಲೇಜು ಕಾರ್ಕಳ, ಗುರುಕೃಪಾ ಪಪೂ ಕಾಲೇಜು ಬೊಲ್ಲೊಟ್ಟು, ಎಸ್‌ಎನ್‌ವಿ ಪಪೂ ಕಾಲೇಜು ಕಾರ್ಕಳ, ಮದರ್ ತೆರೇಸಾ ಪಪೂ ಕಾಲೇಜು ಶಂಕರನಾರಾಯಣ, ವೆಂಕಟರಮಣ ಪಪೂ ಕಾಲೇಜು ಕುಂದಾಪುರ.

ದ.ಕ. ದ್ವಿತೀಯ ಸ್ಥಾನಕ್ಕೆ ತೃಪ್ತಿ
ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಲಿತಾಂಶದಲ್ಲಿ ಕಳೆದ ಬಾರಿ ಪ್ರಥಮ ಸ್ಥಾನ ಗಳಿಸಿದ್ದ ದ.ಕ. ಜಿಲ್ಲೆ ಶೇ.90.91 ಲಿತಾಂಶ ಪಡೆಯುವ ಮೂಲಕ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
2014ರಿಂದ ನಿರಂತರ ಮೂರು ವರ್ಷ (2014, 2015 ಹಾಗೂ 2016) ಪ್ರಥಮ ಸ್ಥಾನದಲ್ಲಿದ್ದ ದಕ್ಷಿಣ ಕನ್ನಡ 2017ರಲ್ಲಿ ದ್ವಿತೀಯ ಸ್ಥಾನಕ್ಕೆ ಕುಸಿದಿತ್ತು. ಕಳೆದ ವರ್ಷ ಪ್ರಥಮ ಸ್ಥಾನ ಪಡೆದು ಬೀಗಿದ ಜಿಲ್ಲೆ ಈ ಬಾರಿ ಮತ್ತೆ ಒಂದು ಸ್ಥಾನ ಕಳೆದುಕೊಂಡಿದೆ.

ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲಿ ಮೊದಲ ನಾಲ್ಕು ಸ್ಥಾನಗಳು ಜಿಲ್ಲೆಯ ಪಾಲಾಗಿರುವುದು ಹೆಮ್ಮೆ. ವಿಜ್ಞಾನ ವಿಭಾಗದಲ್ಲೂ ಟಾಪ್ 10ರಲ್ಲಿ ನಾಲ್ವರು ಕಾಣಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆ ಬರೆದ 38,069 ವಿದ್ಯಾರ್ಥಿಗಳ ಪೈಕಿ 33,088 (ಶೇ.88.92) ಮಂದಿ ಉತ್ತೀರ್ಣರಾಗಿದ್ದಾರೆ. 34,650 ಮಂದಿ ಹೊಸದಾಗಿ ದ್ವಿತೀಯ ಪಿಯು ಪರೀಕ್ಷೆ ಎದುರಿಸಿದ್ದು, 31,500 (ಶೇ. 90.91) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 19,153 ಬಾಲಕರು ಪರೀಕ್ಷೆ ಬರೆದಿದ್ದು, 15,948 (ಶೇ. 83.27) ಮಂದಿ ಪಾಸ್ ಆಗಿದ್ದಾರೆ. ಪರೀಕ್ಷೆಗೆ ಹಾಜರಾದ 18,916 ಬಾಲಕಿಯರ ಪೈಕಿ 17,140 (ಶೇ. 90.61) ಮಂದಿ ತೇರ್ಗಡೆ ಹೊಂದಿದ್ದಾರೆ.

ಕಲಾ ವಿಭಾಗದಲ್ಲಿ 4,831 ಮಂದಿ ಪರೀಕ್ಷೆ ಬರೆದಿದ್ದು, 3,762 (ಶೇ.77.87) ಮಂದಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 16,526 ಮಂದಿ ಪರೀಕ್ಷೆಗೆ ಹಾಜರಾಗಿದ್ದು, 14,347 (ಶೇ.86.81) ಮಂದಿ ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 16,712 ಮಂದಿ ಪರೀಕ್ಷೆಗೆ ಕುಳಿತಿದ್ದು, 14,979 (ಶೇ.89.63) ಉತ್ತೀರ್ಣರಾಗಿದ್ದಾರೆ.

ನಗರ ಪ್ರದೇಶದಲ್ಲಿ ಪರೀಕ್ಷೆ ಬರೆದ 25,408 ವಿದ್ಯಾರ್ಥಿಗಳ ಪೈಕಿ 22,736 (ಶೇ.89.48) ಮಂದಿ ತೇರ್ಗಡೆ ಹೊಂದಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ಎದುರಿಸಿದ 12,661 ಮಂದಿ ಪೈಕಿ 10,352 (ಶೇ.81.76) ಮಂದಿ ಉತ್ತೀರ್ಣರಾಗಿದ್ದಾರೆ. ಹೊಸದಾಗಿ, ಖಾಸಗಿ ಹಾಗೂ ಪುನರಾವರ್ತಿತ ವಿಭಾಗದಲ್ಲಿ ಒಟ್ಟು 38,069 ಮಂದಿ ಪರೀಕ್ಷೆ ಬರೆದಿದ್ದು, 33,088 (ಶೇ.86.92) ಮಂದಿ ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗ ಅಗ್ರಸ್ಥಾನಿಗಳು

* ರಯೀಸಾ, ಎಸ್‌ಆರ್ ಪಿಯು ಕಾಲೇಜು, ಹೆಬ್ರಿ (592)
* ಜಾಗೃತಿ ಜೆ. ನಾಯಕ್, ನರೇಂದ್ರ ಪಿಯು ಕಾಲೇಜು, ಪುತ್ತೂರು (592)
* ಸ್ವಾತಿ, ಎಂಜಿಎಂ ಪಿಯು ಕಾಲೇಜು, ಉಡುಪಿ (592)
* ಪ್ರಥಮ್ ಎನ್, ಶಾರದಾ ಕಾಲೇಜು, ಮಂಗಳೂರು (591)
* ಶಮಿತಾ ಕುಮಾರಿ, ಶಾರದಾ ಕಾಲೇಜು, ಮಂಗಳೂರು (591)
* ರೋಹನ್ ರಾವ್, ಶಾರದಾ ಪಪೂ ಕಾಲೇಜು, ಮಂಗಳೂರು (590)
* ಕೆ.ಶೇಷಾದ್ರಿ ಪೈ, ಬಾಸ್ಕೋಸ್ ಪಪೂ ಕಾಲೇಜು, ಮಂಗಳೂರು (590)

ವಾಣಿಜ್ಯ ವಿಭಾಗ ಅಗ್ರಸ್ಥಾನಿಗಳು
* ಒಲ್ವಿಟಾ ಅನ್ಸಿಲಾ ಡಿಸೋಜ, ಆಳ್ವಾಸ್ ಮೂಡುಬಿದಿರೆ (596)
* ಶ್ರೀಕೃಷ್ಣ ಶರ್ಮಾ, ಸತ್ಯಸಾಯಿ ಕಾಲೇಜು, ಅಳಿಕೆ (596)
* ಶ್ರೀಯಾ ಶೆಣೈ, ಕೆನರಾ ಪಪೂ ಕಾಲೇಜು, ಮಂಗಳೂರು (595)
* ಸ್ವಸ್ತಿಕ್, ಫಿಲೋಮಿನಾ ಕಾಲೇಜು, ಪುತ್ತೂರು (594)
* ಪೃಥ್ವಿ ರೈ, ಶಾರದಾ ಪಪೂ ಕಾಲೇಜು, ಮಂಗಳೂರು (592)

ಈ ಬಾರಿ ಉಡುಪಿ ಜಿಲ್ಲೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ಮತ್ತೆ ಮೊದಲನೇ ಸ್ಥಾನಕ್ಕೇರಿರುವುದು ತುಂಬಾ ಸಂತೋಷ ತಂದಿದೆ. ವಿಶೇಷವಾಗಿ ವಿದ್ಯಾರ್ಥಿಗಳು, ಕಾಲೇಜುಗಳು, ಉಪನ್ಯಾಸಕ ವರ್ಗ, ಇಲಾಖೆ ಅಧಿಕಾರಿಗಳು, ಪೋಷಕರ ಶ್ರಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಕಾರ ಅನನ್ಯ.
– ಸುಬ್ರಹ್ಮಣ್ಯ ಜೋಷಿ, ಉಪ ನಿರ್ದೇಶಕ, ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ

ಈ ಬಾರಿ ದ್ವಿತೀಯ ಸ್ಥಾನ ಬಂದಿದ್ದರೂ ಜಿಲ್ಲೆಯ ವಿದ್ಯಾರ್ಥಿಗಳ ಸಾಧನೆ ಉತ್ತಮವಾಗಿದೆ. ವಾಣಿಜ್ಯ ವಿಭಾಗದಲ್ಲಿ ದ.ಕ ವಿದ್ಯಾರ್ಥಿಗಳು ರಾಜ್ಯದಲ್ಲೇ ಉತ್ತಮ ಫಲಿತಾಂಶ ನೀಡಿದ್ದಾರೆ. ನಿರೀಕ್ಷಿತ ಫಲಿತಾಂಶ ಬಂದಿದ್ದು, ಸಂತಸ ತಂದಿದೆ. ಜಿಲ್ಲಾಡಳಿತ, ಎಲ್ಲ ಕಾಲೇಜುಗಳ ಸಹಕಾರದಿಂದ ಇದು ಸಾಧ್ಯವಾಗಿದೆ.
– ಎಲ್ವಿರಾ ಫಿಲೋಮಿನಾ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು(ಪ್ರಭಾರ), ದ.ಕ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...