More

    ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್: ಕಳೆನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ

    ಹಾಸನ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.

    ಮಲ್ಲಿ ಪಟ್ಟಣ ಹೋಬಳಿ ಕೋಠಿ ದಾಸಯ್ಯನ ಕೊಪ್ಪಲು ಗ್ರಾಮದ ಭೂಮಿಕ (18) ಆತ್ಮಹತ್ಯೆಗೀಡಾದ ವಿದ್ಯಾರ್ಥಿನಿ. ಹಾಸನ ವಿಭಜಿತ ಪಿಯು ಕಾಲೇಜಿನ ಈ ವಿದ್ಯಾರ್ಥಿನಿ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಅನುತೀರ್ಣಗೊಂಡ ಪರಿಣಾಮ ಮನನೊಂದು ಕಳೆನಾಶಕ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಇದನ್ನೂ ಓದಿ: ದ್ವಿತೀಯ ಪಿಯು ಪೂರಕ ಪರೀಕ್ಷೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ನಿಗದಿ

    ಈಕೆಯನ್ನು ಸರ್ಕಾರಿ ಆಸ್ಪತ್ರೆ ಅರಕಲಗೂಡಿಗೆ ತಂದು ಸೇರಿಸಿ ನಂತರ ಹಾಸನಕ್ಕೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತು. ಆದರೂ ರಾತ್ರಿ 8 ಗಂಟೆ ಸಮಯದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವುಗೀಡಾಗಿದ್ದಾಳೆ. ಅರಕಲಗೂಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಮದುವೆ ವಿಚಾರ ಮಾತನಾಡಲು ಯುವತಿಯನ್ನು ಕರೆಸಿಕೊಂಡ ಪ್ರಿಯಕರನಿಂದ ಘೋರ ಕೃತ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts