More

    ಪುದುಚೇರಿಯಲ್ಲಿ ಸಂಕಷ್ಟಕ್ಕೆ ಸಿಲುಕಿದ ಆಡಳಿತಾರೂಢ ಕಾಂಗ್ರೆಸ್

    ಪುದುಚೇರಿ: ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಅಲ್ಲಿನ ಕಾಂಗ್ರೆಸ್ ಶಾಸಕ ಜಾನ್ ಕುಮಾರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

    ಜಾನ್ ಕುಮಾರ್ ಅವರು ಸ್ಪೀಕರ್ ವಿ ಪಿ ಶೀವಕೋಲುಂತು ಅವರಿಗೆ ಮಂಗಳವಾರ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

    ಈ ಮೂಲಕ ಪುದುಚೇರಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಅಲ್ಪಮತಕ್ಕೆ ಕುಸಿದಿದೆ. ವಿರೋಧ ಪಕ್ಷಗಳು ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತು ಮಾಡುವಂತೆ ಸ್ಪೀಕರ್​ಗೆ ಬೇಡಿಕೆ ಸಲ್ಲಿಸಿವೆ.

    33 ಸದಸ್ಯ ಬಲದ ಪುದುಚೇರಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಡಿಎಂಕೆ ಮೈತ್ರಿಯ 17 ಶಾಸಕರು ಇದ್ದರೆ, (ನಾಮನಿರ್ದೇಶಿತರೂ ಸೇರಿದಂತೆ) ವಿರೋಧ ಪಕ್ಷದಲ್ಲಿರುವ ಬಿಜೆಪಿ, ಎಐಎಡಿಎಂಕೆ ಹಾಗೂ ಪಕ್ಷೇತರರ ಸಂಖ್ಯೆ 16 ಇದೆ. ಜಾನ್ ಕುಮಾರ್ ಅವರ ರಾಜೀನಾಮೆ ಸಲ್ಲಿಸುವ ಮೂಲಕ ಕಾಂಗ್ರೆಸ್​ಗೆ ಸಂಕಷ್ಟಕ್ಕೆ ಒಳಗಾಗಿದೆ.

    ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಅವರಿಗೆ ಆಪ್ತರಾಗಿದ್ದ ಜಾನ್ ಕುಮಾರ್ ಅವರು ಇತ್ತೀಚೆಗೆ ದೆಹಲಿಯಲ್ಲಿ ಬಿಜೆಪಿ ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಬೆಳವಣಿಗೆಯ ನಂತರ ಅವರು ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿ ಸೇರಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಬರುವ ಮೇ ನಲ್ಲಿ ಪುದುಚೇರಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. (ಏಜೇನ್ಸಿಸ್)

    ಕಾಲುವೆಗೆ ಬಿದ್ದ ಬಸ್ : 38 ಮಂದಿ ದುರ್ಮರಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts