More

    3 ರಿಂದ 6ರ ವರೆಗೆ ಪಲ್ಸ್ ಪೋಲಿಯೋ

    ಬಾಗಲಕೋಟೆ: ಜಿಲ್ಲಾದ್ಯಂತ ಮಾ. 3 ರಿಂದ 6ರ ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಅಭಿಯಾನ ಸಿದ್ಧತೆಗೆ ಸೂಕ್ತ ಕ್ರಿಯಾ ಯೋಜನೆ ರೂಪಿಸುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ. ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿಯಾಗಿ ನಡೆದ ಜಿಲ್ಲಾಮಟ್ಟದ ಕಾರ್ಯಪಡೆ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳ ಸಮೀಕ್ಷೆ ಕಾರ್ಯ ಕೈಗೊಂಡು ಮಾಹಿತಿ ನೀಡಬೇಕು. ವಲಸೆ ಬಂದ ಮಕ್ಕಳನ್ನು ಗಣನೆಗೆ ತೆಗೆದುಕೊಳ್ಳಬೇಕು. ಈಗಾಗಲೇ ಈ ಬಗ್ಗೆ ವೈದ್ಯಾಧಿಕಾರಿಗಳು ಹಾಗೂ ಮೇಲ್ವಿಚಾರಕರಿಗೆ ತರಬೇತಿ ನೀಡಲಾಗಿದ್ದು, ೆಬ್ರವರಿ 15ರೊಳಗಾಗಿ ಕ್ರಿಯಾಯೋಜನೆ ಸಿದ್ಧಪಡಿಸಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.

    ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಪೋಲಿಯೋ ಲಸಿಕೆಯಿಂದ ಮಕ್ಕಳು ವಂಚಿತರಾಗದಂತೆ ಕ್ರಮವಹಿಸಬೇಕು. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಜತೆಗೆ ಐಇಸಿ ಚಟುವಟಿಕೆ ಹೆಚ್ಚಿಗೆ ಕೈಗೊಳ್ಳಬೇಕು. ತಾಲೂಕು ಹಂತದಲ್ಲಿ ಸಭೆ ನಡೆಸಿ ಕ್ರಿಯಾ ಯೋಜನೆ ಸಿದ್ಧಪಡಿಸಲು ಹೇಳಿದರು.

    ವಿಶ್ವ ಆರೋಗ್ಯ ಸಂಸ್ಥೆ ಎಸ್.ಎಂ.ಒ ಡಾ. ಮುಕುಂದ ಗಲಗಲಿ ಮಾತನಾಡಿ, ಈ ಹಿಂದೆ ವರ್ಷದಲ್ಲಿ ಎರಡು ಸುತ್ತಿನಲ್ಲಿ ಲಸಿಕೆ ನೀಡಲಾಗುತ್ತಿತ್ತು. ಆದರೆ, ಈಗ ಒಂದೇ ಸುತ್ತಿನಲ್ಲಿ ಲಸಿಕೆ ನೀಡಲಾಗುವುದೆಂದು ಸಭೆ ಗಮನಕ್ಕೆ ತಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಕುಮಾರ ಯರಗಲ್ಲ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಸುವರ್ಣ ಕುಲಕರ್ಣಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಕುಸುಮಾ ಮಾಗಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಎಸ್.ಸಿ. ಪಾಟೀಲ, ಆಯಾ ತಾಲೂಕಿನ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts