More

    ಸರಗೂರಿನಲ್ಲಿ ಪಲ್ಸ್ ಪೋಲಿಯೋ

    ಸರಗೂರು: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು 1995ರಲ್ಲಿ ಪ್ರಾರಂಭಿಸಿ 5ದೊಳಗಿನ ಮಕ್ಕಳಿಗೂ ಲಸಿಕೆ ನೀಡುತ್ತ ಬಂದಿದ್ದು, ಪರಿಣಾಮವಾಗಿ ಭಾರತ ಪೋಲಿಯೋ ಮುಕ್ತವಾಗಿದೆ ಎಂದು ಆರೋಗ್ಯಾಧಿಕಾರಿ ಟಿ.ರವಿಕುಮಾರ್ ಹೇಳಿದರು.

    ಪಟ್ಟಣದಲ್ಲಿ ಸಮುದಾಯ ಆರೋಗ್ಯ ಕೇಂದ್ರ ವತಿಯಿಂದ ಭಾನುವಾರ ಆಯೋಜಿಸಿದ್ದ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 5 ವರ್ಷದೊಳಗಿನ ಮಕ್ಕಳಿಗೆ ಶೇ.100ರಷ್ಟು ಪೋಲಿಯೋ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಅಲೆಮಾರಿಗಳು ಹಾಗೂ ಹಾಡಿಗಳಲ್ಲಿಯೂ ಪೂರ್ಣ ಪ್ರಮಾಣದ ಪೋಲಿಯೋ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಮೊಬೈಲ್ ಯೂನಿಟ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು .

    ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಹದೇವ ಪ್ರಸಾದ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಪಾರ್ಥಿಸಾರಥಿ, ಕಸಾಪ ಅಧ್ಯಕ್ಷ ಕೆಂಡಗಣ್ಣ ಸ್ವಾಮಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts