More

    ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

    ಮಡಿಕೇರಿ: ನಗರದ ಹಿಲ್ ರೋಡ್ ಅಂಗನವಾಡಿಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
    ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮೋಹನ್, ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು 6 ಲಸಿಕಾ ತಂಡಗಳನ್ನು ರಚಿಸಲಾಗಿದೆ. ದುರ್ಗಮ ಪ್ರದೇಶಗಳನ್ನು ಗುರಿಯಾಗಿಸಿ 3 ದಿನಗಳ ಕಾಲ ಮಕ್ಕಳಿಗೆ ಲಸಿಕೆ ಹಾಕುತ್ತಾರೆ. ಉಳಿದಂತೆ ಜಿಲ್ಲೆಯಲ್ಲಿ ಒಟ್ಟು 487ಬೂತ್‌ಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜತೆಗೆ 6 ತಂಡಗಳು ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ ತಲಾ 2ರಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.
    ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳು, ಪ್ರವಾಸಿ ಸ್ಥಳಗಳು, ಜನ ಹೆಚ್ಚಿರುವ ಕಡೆ ಬೂತ್‌ಗಳನ್ನು ತೆರೆಯಲಾಗಿದೆ. ಲಸಿಕಾ ಕಾರ್ಯಕರ್ತರು ಇಲ್ಲಿ ಕಂಡು ಬರುವ ಮಕ್ಕಳಿಗೆ ಲಸಿಕೆಯನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಜಿಲ್ಲಾದ್ಯಂತ ಲಸಿಕಾ ಬೂತ್‌ಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 1,960 ಲಸಿಕೆ ಹಾಕುವವರನ್ನು 87 ಮೇಲ್ವಿಚಾರಕರನ್ನು ನಿಯೋಜಿಲಾಗಿದೆ ಎಂದರು.
    2ನೇ ಹಾಗೂ 3ನೇ ದಿನಗಳಂದು ಮನೆ-ಮನೆ ಭೇಟಿ ನೀಡಲು 980 ತಂಡಗಳನ್ನು ರಚಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಲಸಿಕೆ ನೀಡಲು ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನಗರ ಪ್ರದೇಶಗಳಲ್ಲಿ ಲಸಿಕೆ ನೀಡಲು ಅವಶ್ಯಕತೆ ಇರುವ ಕಡೆಗಳಲ್ಲಿ ತರಬೇತಿಯಲ್ಲಿರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರನ್ನು ನಿಯೋಜಿಸಲಾಗಿದೆ ಎಂದರು.
    ಜಿಪಂ ಅಧ್ಯಕ್ಷ ಬಿ.ಎ.ಹರೀಶ್, ರಾಜ್ಯ ನೋಡೆಲ್ ಅಧಿಕಾರಿ ಡಾ.ನಂದ, ಆರ್‌ಸಿಎಚ್ ಅಧಿಕಾರಿ ಡಾ.ಗೋಪಿನಾಥ, ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ, ಮಕ್ಕಳ ತಜ್ಞ ಡಾ.ಪುರುಷೊತ್ತಮ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಮಚಂದ್ರ, ಮಾನಸಿಕ ಆರೋಗ್ಯ ಅಧಿಕಾರಿ ಡಾ.ಡೆವಿನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ರೋಟರಿ ಕ್ಲಬ್ ಅಧ್ಯಕ್ಷ ರತನ್ ತಮ್ಮಯ್ಯ, ರೋಟರಿ ಮಿಸ್ಟ್ ಹಿಲ್ಸ್ ಅಧ್ಯಕ್ಷ ಜಗದೀಶ್, ಲಯನ್ಸ್ ಕ್ಲಬ್‌ನ ಅಧ್ಯಕ್ಷ ಮೋಹನ್ ಕುಮಾರ್, ಇನ್ನರವ್ಹೀಲ್ ಅಧ್ಯಕ್ಷೆ ನಿಷಾ ರೋಟರಿ ಕ್ಲಬ್‌ನ ಸದಸ್ಯರು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts