17ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ

Pulse Polio 11 jan 20
Published on

ಬೆಂಗಳೂರು: ರಾಜ್ಯಾದ್ಯಂತ ಜ.17ರಂದು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಭಾರತ ಪೋಲಿಯೋಮುಕ್ತ ದೇಶವಾಗಿದ್ದು, ಮತ್ತೆ ಮರುಕಳಿಸದಿರಲು ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತ ಪಡಿಸಿಕೊಳ್ಳಬೇಕು. 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಎರಡು ಹನಿ ಲಸಿಕೆ ಹಾಕಿಸಬೇಕು. ಈ ಮೂಲಕ ಪೋಲಿಯೋ ವಿರುದ್ಧ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು ಎಂದು ಇಲಾಖೆ ಮನವಿ ಮಾಡಿಕೊಂಡಿದೆ.

ಕೋವಿಡ್ ಕಾರಣ ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಕೆ ಸೇರಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ಆರೋಗ್ಯ ಕಾರ್ಯಕರ್ತರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಪೋಲಿಯೋ ಲಸಿಕೆ ವಿತರಣೆಯ ಹತ್ತಿರದ ಕೇಂದ್ರಗಳ ಮಾಹಿತಿ ನಿಯರ್​ಬಾಯ್ ವ್ಯಾಕ್ಸಿನೇಷನ್ ಸೆಂಟರ್ ಕರ್ನಾಟಕ ಮೊಬೈಲ್ ಆಪ್​ನಲ್ಲಿಯೂ ದೊರೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net