More

  ಲಸಿಕೆ ಹಾಕಿಸುವುದು ಪಾಲಕರ ಜವಾಬ್ದಾರಿ

  ಶ್ರೀರಂಗಪಟ್ಟಣ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಿತು.

  ತಾಲೂಕು ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ(ಅಭಿವೃದ್ಧಿ) ಅನಂತ್ ಕುಮಾರ್ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿ, ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿದ್ದರೂ, 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಬೇಕು ಎಂದು ಪಾಲಕರಿಗೆ ಸಲಹೆ ನೀಡಿದರು.

  ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿ, ತಾಲೂಕಿನಾದ್ಯಂತ 69 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 10 ಸಾವಿರ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ವಲಸೆ ಜನಾಂಗದ ಮಕ್ಕಳಿಗೂ ಲಸಿಕೆ ಹಾಕಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ತಪ್ಪದೇ ಸಮೀಪದ ಕೇಂದ್ರಕ್ಕೆ ಮಕ್ಕಳನ್ನು ಕರೆ ತಂದು ಲಸಿಕೆ ಹಾಕಿಸಬೇಕೆಂದು ಮನವಿ ಮಾಡಿದರು.

  ತಾಪಂ ಇಒ ವೇಣು, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪಿ.ಮಾರುತಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಕಾಶ್, ಪುರಸಭಾ ಸದಸ್ಯರಾದ ಎಂ.ಎಲ್.ದಿನೇಶ್, ಎಂ.ನಂದೀಶ್, ಮುಖಂಡರಾದ ಲೋಕೇಶ್, ಸೋಮುಸುಂದರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಮಂಗಳಾ, ಆರೋಗ್ಯ ನಿರೀಕ್ಷಣಾಧಿಕಾರಿ ಚಂದನ್, ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts