More

    ಪಂಪ್‌ವೆಲ್ ಮೇಲ್ಸೇತುವೆಯಲ್ಲಿ ಅಪಘಾತ

    ಮಂಗಳೂರು: ವಾರದ ಹಿಂದೆಯಷ್ಟೇ ವಾಹನ ಸಂಚಾರಕ್ಕೆ ಮುಕ್ತಗೊಂಡಿದ್ದ ಪಂಪ್‌ವೆಲ್ ಮೇಲ್ಸೇತುವೆಯಲ್ಲಿ ಶನಿವಾರ ಕಾರುಗಳ ನಡುವೆ ಮೊದಲ ಅಪಘಾತ ಸಂಭವಿಸಿ ಒಬ್ಬರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
    ಬಜಾಲ್ ನಿವಾಸಿ ಪ್ರವೀಣ್ ಫರ್ನಾಂಡಿಸ್(45)ಮೃತಪಟ್ಟಿದ್ದು, ರಮೇಶ್ ಮೆಂಡನ್ ಹಾಗೂ ರಂಜಿಲ್, ಆಲ್ಟೊ ಕಾರಿನಲ್ಲಿದ್ದ ಆಯುಷಾ ಹಾಗೂ ಮಹಮ್ಮದ್ ರಫ್ವಾನ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಂತೂರು ಕಡೆಯಿಂದ ಉಳ್ಳಾಲದತ್ತ ಸಂಚರಿಸುತ್ತಿದ್ದ ಆಲ್ಟೋ ಕಾರು ಇಂಡಿಯಾನ ಆಸ್ಪತ್ರೆ ಮುಂಭಾಗ ಎಡಭಾಗದ ದ್ವಿಪಥ ರಸ್ತೆಯಿಂದ ಬಲಭಾಗದಲ್ಲಿದ್ದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಉಳ್ಳಾಲ ಕಡೆಯಿಂದ ನಂತೂರಿಗೆ ತೆರಳುತ್ತಿದ್ದ ಡಸ್ಟರ್ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ ಡಸ್ಟರ್ ಕಾರು ಜಖಂಗೊಂಡು ರಸ್ತೆಯಲ್ಲೇ ನಿಂತುಕೊಂಡಿದ್ದರೆ, ಆಲ್ಟೊ ಕಾರು ಮೇಲ್ಸೇತುವೆಯಿಂದ ಪಕ್ಕದ ಸರ್ವೀಸ್ ರಸ್ತೆಗೆ ಬಿದ್ದಿದೆ.

    ಅಪಘಾತದಲ್ಲಿ ಗಂಭೀರ ಗಾಯಗೊಂಡ ಡಸ್ಟರ್ ಕಾರಿನಲ್ಲಿದ್ದ ಪ್ರವೀಣ್ ಅವರನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಎರಡೂ ಕಾರುಗಳು ನಜ್ಜುಗುಜ್ಜಾಗಿವೆ. ಎರಡೂ ಕಾರನ್ನು ಕ್ರೇನ್ ಬಳಸಿ ತೆರವುಗೊಳಿಸಲಾಯಿತು. ಘಟನೆಯಿಂದ ಪರಿಸರದಲ್ಲಿ ಒಂದು ತಾಸಿಗೂ ಹೆಚ್ಚುಕಾಲ ವಾಹನಗಳ ಸಂಚಾರಕ್ಕೆ ಅಡಚಣೆಯಾಯಿತು. ಅಪಘಾತ ವೀಕ್ಷಿಸಲು ನೂರಾರು ಮಂದಿ ಜಮಾಯಿಸಿದ್ದರಿಂದ ವಾಹನ ಸಂಚಾರ ನಿಯಂತ್ರಿಸುವುದೇ ಪೊಲೀಸರಿಗೆ ಸವಾಲಾಗಿತ್ತು.
    ಮಂಗಳೂರು ದಕ್ಷಿಣ ಸಂಚಾರ (ನಾಗುರಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts