More

    ಪಂಪ್​ವೆಲ್ ಮೇಲ್ಸೇತುವೆ ಬಹುತೇಕ ಪೂರ್ಣ

    ಮಂಗಳೂರು: ದಶಕದ ಕಾಮಗಾರಿಯ ಇತಿಹಾಸ ಹೊಂದಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ಈ ತಿಂಗಳು ಮುಗಿಯುವುದು ದಿಟ.
    ಮೇಲ್ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಮೇಲ್ಸೇತುವೆ ಜೋಡಿಸಿದ ರಸ್ತೆಗಳಿಗೆ ಡಾಂಬರು ಕೆಲಸ ನಡೆಯುತ್ತಿದೆ. ಇಲಾಖೆ ಹಿರಿಯ ಅಧಿಕಾರಿಗಳ ಪ್ರಕಾರ ‘ಇದೇ’ ಜ.28 ಅಥವಾ 29ರಂದು ಈ ಸೇತುವೆ ಪ್ರಯಾಣಿಕರ ವಾಹನಗಳ ಓಡಾಟಕ್ಕೆ ಸಿದ್ಧವಾಗಲಿದೆ.
    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ನಮ್ಮದೇ ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ಗಳು ಉಭಯ ಕಡೆಗಳಿಂದಲೂ ಕಾಮಗಾರಿ ಕಾಲಮಿತಿಯಲ್ಲಿ ಮುಗಿಸುವ ಕುರಿತು ಭರವಸೆ ದೊರೆತಿದೆ. ನಾನು ಕೂಡ ಅದೇ ರೀತಿಯ ವಿಶ್ವಾಸ ಹೊಂದಿರುವುದಾಗಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಶುಕ್ರವಾರ ‘ವಿಜಯವಾಣಿ’ಗೆ ತಿಳಿಸಿದ್ದಾರೆ.

    ಡಿ.31ರಂದು ಸಂಸದ ನಳಿನ್‌ಕುಮಾರ್ ಕಟೀಲು ಅವರ ಅಧ್ಯಕ್ಷತೆಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪಂಪ್‌ವೆಲ್ ಫ್ಲೈಓವರ್ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಕಾಮಗಾರಿಯ ಮೇಲ್ವಿಚಾರಣೆ ಜವಾಬ್ದಾರಿ ಜಿಲ್ಲಾಧಿಕಾರಿಯವರಿಗೆ ನೀಡಿರುವುದು ಫಲ ನೀಡಿದೆ.
    ಎನ್‌ಎಚ್‌ಎಐ ಯೋಜನಾ ನಿರ್ದೇಶಕರು, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರು, ಲೋಕೋ ಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರು ಹಾಗೂ ಮಂಗಳೂರು ತಹಸೀಲ್ದಾರರು ಇರುವ ನಾಲ್ಕು ಮಂದಿಯ ಸಮಿತಿ ಕಾಮಗಾರಿಯ ದೈನಂದಿನ ಪ್ರಗತಿಯ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಈ ಸಮಿತಿ ಸದಸ್ಯರ ಜತೆ ಜಿಲ್ಲಾಧಿಕಾರಿ ದಿನಂಪ್ರತಿ ಸಭೆ ನಡೆಸುತ್ತಾರೆ. ಸಭೆ ಬಳಿಕ ಜಿಲ್ಲಾಧಿಕಾರಿ ಸಂಬಂಧಪಟ್ಟವರಿಗೆ ನಿರ್ದೇಶನ ನೀಡುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts