18 C
Bangalore
Friday, December 6, 2019

ಡಿಸೆಂಬರ್‌ಗೆ ಫ್ಲೈಓವರ್ ಪೂರ್ಣ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಮಂಗಳೂರು: ಗಡುವಿನ ಮೇಲೆ ಗಡುವು ಪಡೆಯುತ್ತಲೇ ಸಾವಧಾನವಾಗಿ ಪ್ರಗತಿಯಲ್ಲಿರುವ ಪಂಪ್‌ವೆಲ್ ಫ್ಲೈಓವರ್ ಈ ವರ್ಷ ಡಿಸೆಂಬರ್ ಒಳಗೆ ಪೂರ್ಣಗೊಂಡು, ಜನವರಿ ಮೊದಲ ವಾರ ಉದ್ಘಾಟನೆಗೊಳ್ಳುವ ನಿರೀಕ್ಷೆಯಿದೆ.

ಶನಿವಾರ ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿ ಸುದ್ದಿಗಾರರ ಜತೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, 2019ರ ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳುವುದಾಗಿ ಹೆದ್ದಾರಿ ಅಧಿಕಾರಿಗಳು ಹಾಗೂ ಗುತ್ತಿಗೆದಾರ ನವಯುಗ ಸಂಸ್ಥೆ ತಿಳಿಸಿದೆ. ಹಾಗಾಗಿ ಜನವರಿ ಮೊದಲ ವಾರದಲ್ಲಿ ಪಂಪ್‌ವೆಲ್ ಮೇಲ್ಸೇತುವೆ ಲೋಕಾರ್ಪಣೆ ಮಾಡಲಾಗುವುದು ಎಂದರು.

ಈ ಭಾಗದಲ್ಲಿ ರಾ.ಹೆ.ಕಾಮಗಾರಿ ಶೇ.95 ಮುಗಿದು ವಾಹನ ಸಂಚಾರಕ್ಕೆ ಯೋಗ್ಯವಾಗಿದೆ. ಇದರ ನಡುವಿನ ಮಂಗಳೂರು ಲೋಕಸಭಾ ವಿಭಾಗಕ್ಕೊಳಪಟ್ಟ ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಕಾನೂನಾತ್ಮಕ, ಆಡಳಿತಾತ್ಮಕ ಹಾಗೂ ವ್ಯಾವಹಾರಿಕ ಸಮಸ್ಯೆಯಿಂದ ನಿಧಾನಗತಿಯಲ್ಲಿ ಸಾಗಿತ್ತು. ಕಳೆದ ಬಾರಿ ಒತ್ತಡ ಹೇರಿ ತೊಕ್ಕೊಟ್ಟು ಕಾಮಗಾರಿ ಮುಗಿಸಲಾಗಿದೆ.

ಅಂಡರ್ ಪಾಸ್, ಮಳೆಯಿಂದ ವಿಳಂಬ
ಕಳೆದ ಜನವರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾರ್ಯದರ್ಶಿ ಭೇಟಿ ನೀಡಿದ್ದ ವೇಳೆ ಗುತ್ತಿಗೆ ವಹಿಸಿದ ಸಂಸ್ಥೆ ಅನುದಾನದ ಕೊರತೆ ಬಗ್ಗೆ ತಿಳಿಸಿದ್ದರು. ಆ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸಹಕಾರದಿಂದ ಬ್ಯಾಂಕ್ ಸಾಲ ಹಾಗೂ ಸರ್ಕಾರದ ಕಡೆಯಿಂದ ಹೆಚ್ಚುವರಿ ಕೆಲಸಕ್ಕೆ ಅನುದಾನ ಒದಗಿಸಲಾಗಿತ್ತು. ಇದೇ ವೇಳೆ ಇಂಡಿಯಾನ ಆಸ್ಪತ್ರೆಯಿಂದ ಫಾದರ್ ಮುಲ್ಲರ್ ಸಭಾಂಗಣಕ್ಕೆ ಸಂಪರ್ಕಿಸುವ ಅಂಡರ್ ಪಾಸ್ ಬೇಡಿಕೆಯ ಮೇರೆಗೆ ಕಳೆದ ವರ್ಷ ಅನುಮತಿ ದೊರಕಿ ಅದನ್ನು ಮಾಡಿ ಮುಗಿಸುವ ಅನಿವಾರ್ಯತೆ ಎದುರಾಯಿತು. ಅದೀಗ ಪೂರ್ಣಗೊಂಡಿದೆ. ಹಾಗಾಗಿ ಕಾಮಗಾರಿ ವೇಗಪಡೆದು ಈ ವರ್ಷ ಮುಗಿಸುವಂತೆ ಒತ್ತಡ ಹೇರಲಾಗಿದೆ. ಈಗಾಗಲೇ ಜಿಲ್ಲಾಧಿಕಾರಿ ಹೆದ್ದಾರಿ ಪ್ರಾಧಿಕಾರ ಜತೆ ಮೂರು ಬಾರಿ ಸಭೆ ಮಾಡಿದ್ದಾರೆ. ಮಳೆ ಇದ್ದ ಕಾರಣ ಕಾಮಗಾರಿ ನಿಧಾನವಾಯಿತು. ಇದೀಗ ಮತ್ತೆ ವೇಗ ಪಡೆದಿದೆ. ಇಂದು ಕೂಡ ಸಭೆ ನಡೆದಿದೆ ಎಂದರು.

ಮೇಲ್ಸೇತುವೆಯ ಇಕ್ಕೆಲಗಳೂ ಅಗಲ
ಮೇಲ್ಸೇತುವೆಯ ಇಕ್ಕೆಲಗಳಲ್ಲಿರುವ ರಸ್ತೆಯನ್ನು ಸರ್ವಿಸ್ ರಸ್ತೆ ಎಂದು ಪರಿಗಣಿಸದೆ ಹೆದ್ದಾರಿಯಾಗಿಯೇ ತೆಗೆದುಕೊಳ್ಳಲಾಗುವುದು. ಈಗಿರುವ ರಸ್ತೆ ಕಿರಿದಾಗಿರುವುದನ್ನು ಎರಡು ಕಡೆಯೂ ತಲಾ 20 ಮೀಟರ್‌ಗೆ ಅಗಲಗೊಳಿಸಲಾಗುವುದು ಎಂದು ನಳಿನ್ ಹೇಳಿದರು.
ಪಂಪ್‌ವಲ್ ಮೇಲ್ಸೇತುವೆಯ ಇಕ್ಕೆಲಗಳ ರಸ್ತೆಗಳ ಡಾಮರು ಕಿತ್ತು ಹೋಗಿ ವಾಹನ ಸಂಚಾರಕ್ಕೆ ಅಯೋಗ್ಯವಾಗಿದೆ. ಇಂದು ಸ್ಥಳಕ್ಕೆ ಭೇಟಿ ನೀಡಿ ಆ ರಸ್ತೆಯುದ್ದಕ್ಕೂ ಶಾಸಕ ವೇದವ್ಯಾಸ ಕಾಮತ್, ಇತರ ಕೆಲ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ಪರಿಶೀಲಿಸಿದ ನಳಿನ್, ಅಧಿಕಾರಿಗಳಿಗೆ ಬುಧವಾರದಿಂದ ರಸ್ತೆಯ ಡಾಮರೀಕರಣ ನಡೆಸುವಂತೆ ತಾಕೀತು ಮಾಡಿದರು. ಡಾಮಗಾರಿ ಸಮಯ ಇಕ್ಕೆಲಗಳ ರಸ್ತೆಗಳನ್ನು ಏಕ ಸಮಯದಲ್ಲಿ ಬಂದ್ ಮಾಡದೆ ಒಂದು ರಸ್ತೆಗೆ ಡಾಮರೀಕರಣ ನಡೆಸಿ ಮತ್ತೆ ಇನ್ನೊಂದು ರಸ್ತೆಗೆ ಡಾಮರೀಕರಣ ನಡೆಸುವಂತೆ ಹೆದ್ದಾರಿ ಅಧಿಕಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಸೂಚಿಸಿದರು.
ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿಶು ಮೋಹನ್, ಮನಪಾ ಆಯುಕ್ತ ಶಾನಾಡಿ ಅಜಿತ್ ಕುಮಾರ್, ನಿಯೋಜಿತ ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು, ಸಂದೀಪ್ ಗರೋಡಿ, ಮಾಜಿ ಕಾರ್ಪೊರೇಟರ್‌ಗಳಾದ ಆಶಾ ಡಿಸಿಲ್ವ, ವಿಜಯ ಕುಮಾರ್ ಶೆಟ್ಟಿ, ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...