1971ರ ಯುದ್ಧ ಕೈದಿಗಳನ್ನೂ ಬಿಡುಗಡೆ ಮಾಡಿ: ಪಾಕ್​ಗೆ ಅಮರಿಂದರ್​ ಸಿಂಗ್​ ಮನವಿ

ಗುರುದಾಸಪುರ: 1971ರ ಭಾರತ ಪಾಕಿಸ್ತಾನ ಯುದ್ಧದಲ್ಲಿ ಸೆರೆಹಿಡಿಯಲ್ಪಿಟ್ಟಿರುವ ಯುದ್ಧ ಕೈದಿಗಳನ್ನು ಬಿಡುಗಡೆ ಮಾಡಿ ಎಂದು ಪಂಜಾಬ್​ನ ಮುಖ್ಯಮಂತ್ರಿ ಅಮರಿಂದರ್​ ಸಿಂಗ್​ ಪಾಕಿಸ್ತಾನ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಭಾರತೀಯ ವಾಯುಪಡೆಯ ಪೈಲಟ್​ ಅಭಿನಂದನ್​ ವರ್ಧಮಾನ್​ ಅವರನ್ನು ಶುಕ್ರವಾರ ರಾತ್ರಿ ಪಾಕಿಸ್ತಾನ ಬಿಡುಗಡೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪಾಕ್​ ಜೈಲುಗಳಲ್ಲಿರುವ ಯುದ್ಧ ಕೈದಿಗಳನ್ನೂ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರ ಪಾಕ್​ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದ್ದಾರೆ. (ಏಜೆನ್ಸೀಸ್​)