ಮಕ್ಕಳಿಗೆ ಸಂಸ್ಕಾರ ನೀಡುವ ಕೆಲಸ ನಿರಂತರ : ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಆಶಯ

New Project (4)
Published on

ವಿಜಯವಾಣಿ ಸುದ್ದಿಜಾಲ ಕಿನ್ನಿಗೋಳಿ

ಹರಿಕೃಷ್ಣ ಪುನರೂರು ಸಾಕಷ್ಟು ಸವಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಇದೀಗ ಅವರ ಮಗ ಪುನರೂರು ಪ್ರತಿಷ್ಠಾನದ ಮೂಲಕ ಸಾವಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಪ್ರತಿಷ್ಠಾನದ ಮೂಲಕ ಮಕ್ಕಳಿಗೆ ಸಂಸ್ಕಾರ ನೀಡುವ ಕೆಲಸ ನಿರಂತರವಾಗಿರಲಿ ಕಟೀಲು ಕ್ಷೇತ್ರದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಹೇಳಿದರು.

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ವಠಾರದಲ್ಲಿ ಪುನರೂರು ಪ್ರತಿಷ್ಠಾನ ವತಿಯಿಂದ ಶನಿವಾರ ‘ಪುನರೂರು ಸಂಭ್ರಮ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಮೂಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಅತುಲ್ ಕುಡ್ವ ಶುಭಾಶಂಸನೆಗೈದರು. ಸುರತ್ಕಲ್ ಶ್ರೀ ನಾಟ್ಯಂಜಲಿ ಕಲಾ ಅಕಾಡೆಮಿ ನಿರ್ದೇಶಕ ವಿ.ಚಂದ್ರಶೇಖರ ನಾವಡ, ಕಿನ್ನಿಗೋಳಿ ಯುಗಪುರುಷದ ಭುವನಾಭಿರಾಮ ಉಡುಪ, ಪುನರೂರು ಕ್ಷೇತ್ರದ ಆಡಳಿತ ಮೊಕ್ತೇಸರ ಪಟೇಲ್ ವಾಸುದೇವ ರಾವ್, ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷೆ ಎಚ್.ಕೆ.ಉಷಾರಾಣಿ, ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು, ಜನವಿಕಾಸ ಸಮಿತಿ ಅಧ್ಯಕ್ಷ ಶಶಿಕರ ಕೆರೆಕಾಡು ಮತ್ತಿತರರಿದ್ದರು.

ಅಧ್ಯಕ್ಷ ದೇವಪ್ರಸಾದ್ ಪುನರೂರು ಸ್ವಾಗತಿಸಿದರು. ಗೀತಾ ಶೆಟ್ಟಿ ವಂದಿಸಿದರು. ಜಿತೇಂದ್ರ ವಿ.ರಾವ್ ಹೆಜವಾಡಿ ನಿರೂಪಿಸಿದರು. ಬಳಿಕ ಪ್ರತಿಭಾ ಸೌರಭ- 2024 ವಿಜೇತರಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಸುರತ್ಕಲ್ ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ ವತಿಯಿಂದ ನೃತ್ಯ ಕೌಸ್ತುಭ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net