ಯಕ್ಷಗಾನದ ಅಪ್ಪಟ ಪ್ರೇಮಿ

halambi
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ, ಸಾಸ್ತಾನ ರೋಟರಿ ಕ್ಲಬ್ ಸಹಕಾರದಲ್ಲಿ ಜಿ.ಸರೋಜಮ್ಮ ಪ್ರಾಯೋಜಿತ ಪುಂಡಲೀಕ ಹಾಲಂಬಿ ದತ್ತಿ ಕಾರ್ಯಕ್ರಮದಲ್ಲಿ ಪುಂಡಲೀಕ ಹಾಲಂಬಿ ಪ್ರಶಸ್ತಿ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ಸ್ವೀಕರಿಸಿದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ ಅಧ್ಯಕ್ಷ ಆನಂದ ಸಿ.ಕುಂದರ್ ಮತ್ತಿತರರು ಇದ್ದರು
Published on

ಕೋಟ: ಹಾಲಂಬಿಯವರು ಯಕ್ಷಗಾನದ ಅಪ್ಪಟ ಪ್ರೇಮಿಯಾಗಿದ್ದರು. ಪ್ರೀತಿ ವಿಶ್ವಾಸದಿಂದ ಹಾಲಂಬಿ ಪ್ರಶಸ್ತಿ ಸ್ವೀಕರಿಸಿದ್ದೇನೆ ಎಂದು ಹಿರಿಯ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ಹೇಳಿದರು.

ಗುಂಡ್ಮಿ ಸಾಲಿಗ್ರಾಮ ಯಕ್ಷಗಾನ ಕಲಾಕೇಂದ್ರದ ಸದಾನಂದ ರಂಗಮಂಟಪದಲ್ಲಿ ಭಾನುವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ, ಸಾಸ್ತಾನ ರೋಟರಿ ಕ್ಲಬ್ ಸಹಕಾರದಲ್ಲಿ ಜಿ.ಸರೋಜಮ್ಮ ಪ್ರಾಯೋಜಿತ ಪುಂಡಲೀಕ ಹಾಲಂಬಿ ದತ್ತಿ ಕಾರ್ಯಕ್ರಮದಲ್ಲಿ ಪುಂಡಲೀಕ ಹಾಲಂಬಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಅಧ್ಯಕ್ಷತೆ ವಹಿಸಿದ್ದರು. ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ ಅಧ್ಯಕ್ಷ ಆನಂದ ಸಿ.ಕುಂದರ್ ಉದ್ಘಾಟಿಸಿದರು.

ಹಿರಿಯ ಯಕ್ಷಗಾನ ಕಲಾವಿದ ಐರೋಡಿ ಗೋವಿಂದಪ್ಪ ಅವರಿಗೆ ಪುಂಡಲೀಕ ಹಾಲಂಬಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಸಾಪ ಜಿಲ್ಲಾ ವತಿಯಿಂದ ಹಾಲಂಬಿ ಅವರ ಪತ್ನಿ ಜಿ.ಸರೋಜುಮ್ಮ ಅವರನ್ನು ಗೌರವಿಸಲಾಯಿತು.

ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಆಶಯ ಭಾಷಣ ಮಾಡಿದರು. ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆ ಅಧ್ಯಾಪಕ ನರೇಂದ್ರ ಕುಮಾರ ಕೋಟ ಪ್ರಶಸ್ತಿ ಪುರಸ್ಕೃತರ ಪರಿಚಯ ನೀಡಿದರು.

ಕನ್ನಡ, ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ಪೂರ್ಣಿಮಾ, ಹಾಲಂಬಿ ಅವರ ಪತ್ನಿ ಜಿ.ಸರೋಜಮ್ಮ ಪುಂಡಲೀಕ ಹಾಲಂಬಿ, ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್, ಗೋಳಿಗರಡಿ ಮೇಳದ ಯಜಮಾನ ವಿಠಲ ಪೂಜಾರಿ, ಯಕ್ಷಗಾನ ಚಿಂತಕ ಸುರೇಂದ್ರ ಫಣಿಯೂರು, ಕಸಾಪ ಗೌರವಾಧ್ಯಕ್ಷ ಮನೋಹರ್ ಪಿ., ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್ ಅಧ್ಯಕ್ಷೆ ಲೀಲಾವತಿ ಗಂಗಾಧರ ಪೂಜಾರಿ, ಕಾಪು ತಾಲ್ಲೂಕು ಕಸಾಪ ಅಧ್ಯಕ್ಷ ಪುಂಡಲೀಕ ಮರಾಠೆ, ಬ್ರಹ್ಮಾವರ ರಾಮಚಂದ್ರ ಐತಾಳ ಇದ್ದರು. ರಾಮಂಚಂದ್ರ ಐತಾಳ ಸ್ವಾಗತಿಸಿದರು. ಸುಲತಾ ಹೆಗ್ಡೆ ವಂದಿಸಿದರು. ಅಧ್ಯಾಪಕ ಸತೀಶ ವಡ್ಡರ್ಸೆ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net