ಪುಣೆ-ಹುಬ್ಬಳ್ಳಿ ವಂದೇ ಭಾರತ್ ರೈಲು ಸಂಚಾರ ಆರಂಭ

ಹುಬ್ಬಳ್ಳಿ : ಎರಡು ವಾಣಿಜ್ಯ ನಗರಿಗಳಾದ ಪುಣೆ ಮತ್ತು ಹುಬ್ಬಳ್ಳಿ ಮಾರ್ಗ ಮಧ್ಯೆ ಪ್ರಾರಂಭಗೊಂಡ ವಂದೇ ಭಾರತ್ ರೈಲಿಗೆ ಸೋಮವಾರ ತಡರಾತ್ರಿ ಎಸ್​ಎಸ್​ಎಸ್ ಹುಬ್ಬಳ್ಳಿ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

ಉದ್ಘಾಟನೆಯ ದಿನವಾದ ಸೋಮವಾರದಂದು ಪುಣೆಯಿಂದ ಸಂಚಾರ ಪ್ರಾರಂಭಿಸಿದ ವಂದೇ ಭಾರತ್ ರೈಲು, ರಾತ್ರಿ 8.27ಕ್ಕೆ ಮಿರಜ್ ರೈಲು ನಿಲ್ದಾಣದಿಂದ ಹೊರಟು, ಮಧ್ಯರಾತ್ರಿ ಸುಮಾರು 12.30 ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಬಂದು ತಲುಪಿತು.

ರಾಜ್ಯದ 10ನೇ ವಂದೇ ಭಾರತ್ ರೈಲು ಇದಾಗಿದ್ದು, ಹಲವಾರು ವಿಶೇಷತೆಗಳನ್ನು ಹೊಂದಿದೆ. 8 ಬೋಗಿಗಳನ್ನು ಹೊಂದಿರುವ ಈ ರೈಲಿನಲ್ಲಿ 530 ಆಸನಗಳು ಇವೆ.

ಪುಣೆ-ಎಸ್​ಎಸ್​ಎಸ್ ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು, ಈ ಮಾರ್ಗದ ಅತಿ ಹೆಚ್ಚಿನ ವೇಗದ ರೈಲಾಗಿದೆ. ಎಂಟೂವರೆ ತಾಸಿನಲ್ಲಿ 557 ಕಿಮೀ ಸಂಚರಿಸುವ ಸಾಮರ್ಥ್ಯ ಹೊಂದಿದೆ.

ಹುಬ್ಬಳ್ಳಿ-ಪುಣೆ ಮಧ್ಯೆ ಟ್ರೖೆ ವೀಕ್ಲಿ ವಂದೇ ಭಾರತ್ ರೈಲು ಸೆ. 18 ರಿಂದ ವಾರದಲ್ಲಿ ಮೂರು ದಿನ ಸಂಚರಿಸಲಿದೆ. ಸೆ. 18 ರಿಂದ ಎಸ್​ಎಸ್​ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಹಾಗೂ ಸೆ. 19 ರಿಂದ ಪುಣೆಯಿಂದ ನೂತನ ವಂದೇ ಭಾರತ್ ರೈಲು ಸಂಚರಿಸಲಿದೆ.

ಪ್ರತಿ ಬುಧವಾರ, ಶುಕ್ರವಾರ ಮತ್ತು ಭಾನುವಾಋದಂದು ಎಸ್​ಎಸ್​ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಬೆಳಗಿನಜಾವ 5 ಗಂಟೆಗೆ ಹೊರಡುವ ರೈಲು, ಅದೇ ದಿನ ಮಧ್ಯಾಹ್ನ 1.30ಕ್ಕೆ ಪುಣೆ ತಲುಪಲಿದೆ.

ಪ್ರತಿ ಗುರುವಾರ, ಶನಿವಾರ ಮತ್ತು ಸೋಮವಾರ ಪುಣೆಯಿಂದ ಮಧ್ಯಾಹ್ನ 2.15ಕ್ಕೆ ಹೊರಡುವ ರೈಲು, ಅದೇ ದಿನ ರಾತ್ರಿ 10.45ಕ್ಕೆ ಎಸ್​ಎಸ್​ಎಸ್ ಹುಬ್ಬಳ್ಳಿ ನಿಲ್ದಾಣ ತಲುಪಲಿದೆ.

ಧಾರವಾಡ, ಬೆಳಗಾವಿ, ಮೀರಜ್, ಸಾಂಗ್ಲಿ ಮತ್ತು ಸತಾರಾ ನಿಲ್ದಾಣಗಳಿಗೆ ಈ ವಂದೇ ಭಾರತ್ ರೈಲಿಗೆ ನಿಲುಗಡೆ ಸೌಲಭ್ಯ ಒದಗಿಸಲಾಗಿದೆ.

ರೈಲು ಸೋಮವಾರ ತಡರಾತ್ರಿ ಎಸ್​ಎಸ್​ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಜನರು ಮೋಬೈಲ್ ಲೈಟ್ ಬೆಳಗಿಸಿ, ಸ್ವಾಗತಿಸಿದರು.

Share This Article

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…