ಇನ್‌ಸ್ಟಾಗ್ರಾಮ್ ರೀಲ್ಸ್ ಮಾಡುವಾಗ ಕಾಲು ಜಾರಿ ಬಿದ್ದು ಪ್ರಾಣ ಬಿಟ್ಟ ಯುವಕ!

mobile
Published on

ಪುಣೆ: ಸೋಶಿಯಲ್ ಮೀಡಿಯಾ ಮಿತವಾಗಿ ಬಳಸಿದ್ರೆ ಒಳ್ಳೆಯದಾಗಿದೆ. ಸಾಮಾಜಿಕ ತಾಣಗಳಾದ ಇನ್ಸ್‌ಸ್ಟಾಗ್ರಾಮ್ ಮತ್ತು ಟಿಕ್‌ಟಾಕ್ ಇತ್ತೀಚಿನ ದಿನಗಳಲ್ಲಿ ಬಹಳ ಪ್ರಸಿದ್ಧವಾಗಿದೆ.  ಇನ್ಸ್‌ಸ್ಟಾಗ್ರಾಮ್ ರೀಲ್ಸ್ ಮಾಡುವ ಹವ್ಯಾಸವು ಯುವಕನೊಬ್ಬನ ಪ್ರಾಣಕ್ಕೆ ಕಂಟಕ ತಂದಿದೆ.

ದತ್ತ ಭಾರತಿ (24) ಮೃತ. ಈತ ವರಾಲೆ ನಿವಾಸಿಯಾಗಿದ್ದಾನೆ. ಇನ್‌ಸ್ಟಾಗ್ರಾಮ್ ರೀಲ್ಸ್ ಮಾಡುವಾಗ ಅಣೆಕಟ್ಟೆಯಿಂದ ಕಾಲು ಜಾರಿ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಪುಣೆಯಲ್ಲಿ ನಡೆದಿದೆ.

ದತ್ತ ಭಾರತಿ, ಪುಣೆ ಜಿಲ್ಲೆಯ ಖೇಡ್‌ನಲ್ಲಿರುವ ಭಾಮಾ ಆಸ್ಖೇಡ್ ಡ್ಯಾಮ್‌ಗೆ ಇನ್‌ಸ್ಟಾಗ್ರಾಮ್ ರೀಲ್ಸ್ ಮಾಡಲು ಹೋಗಿದ್ದ. ಅಣೆಕಟ್ಟೆಯಲ್ಲಿ ಕಾಲು ಜಾರಿ ಬಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಆಗಮಿಸಿ ಶವಕ್ಕಾಗಿ ಹುಡುಕಾಟ ನಡೆಸಿದ್ದು, ಮಧ್ಯಾಹ್ನದ ವೇಳೆಗೆ ಶವವನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪೊಲೀಸರ ಮಾಹಿತಿಯ ಪ್ರಕಾರ, ರೀಲ್ಸ್ ಮಾಡುವ ಮುನ್ನ ದತ್ತ ಭಾರತಿ ಮದ್ಯ ಸೇವಿಸಿದ್ದ ಎನ್ನಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net