ಇಂದು ಪುನೀತ್ ಹುಟ್ಟುಹಬ್ಬ; ಅಮೇಜಾನ್ ಪ್ರೖೆಮ್​ಗೆ ಬಂತು ಗಂಧದ ಗುಡಿ

Puneeth Rajkumar
Published on

ಇಂದು ನಟ ಪುನೀತ್ ರಾಜಕುಮಾರ್ ಅವರ 48ನೇ ವರ್ಷದ ಹುಟ್ಟುಹಬ್ಬ. ಹೀಗಾಗಿ ಕಂಠೀರವ ಸ್ಟುಡಿಯೋದಲ್ಲಿರುವ ಅಪು್ಪ ಸ್ಮಾರಕದ ಬಳಿ ಅವರ ಕುಟುಂಬದವರು, ಸಂಬಂಧಿಕರು, ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಲಿರುವ ಅಸಂಖ್ಯಾತ ಅಭಿಮಾನಿಗಳು ಸ್ಮಾರಕಕ್ಕೆ ನಮಿಸಲಿದ್ದಾರೆ. ಹಾಗೆಯೇ ಅಭಿಮಾನಿಗಳಿಂದ ಅನ್ನದಾನ, ರಕ್ತದಾನ ಹಾಗೂ ನೇತ್ರದಾನ ಶಿಬಿರ ಆಯೋಜಿಸಿದ್ದಾರೆ.

ಇನ್ನು, ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರು ನಟಿಸಿರುವ ಕೊನೆಯ ಸಿನಿಮಾ ಕರ್ನಾಟಕದ ಪ್ರಕೃತಿ ಸಂಪತ್ತನ್ನು ಅನಾವರಣಗೊಳಿಸುವ ‘ಗಂಧದ ಗುಡಿ’ ಚಿತ್ರವನ್ನು ಓಟಿಟಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ‘ಗಂಧದ ಗುಡಿ - ಜರ್ನಿ ಆಫ್ ಎ ಟ್ರೂ ಹೀರೋ’ ಚಿತ್ರವನ್ನು ಅಶ್ವಿನಿ ಪುನೀತ್ ರಾಜಕುಮಾರ್ ತಮ್ಮ ಪಿಆರ್​ಕೆ ಪ್ರೊಡಕ್ಷನ್ಸ್ ಬ್ಯಾನರ್​ನಲ್ಲಿ ನಿರ್ವಿುಸಿದ್ದು, ಅಮೋಘವರ್ಷ ನಿರ್ದೇಶಿಸಿದ್ದಾರೆ. ಚಿತ್ರವನ್ನು ಅಮೆಜಾನ್ ಪ್ರೖೆಮ್ ವಿಡಿಯೋದಲ್ಲಿ ಕನ್ನಡದಲ್ಲಿ ಪ್ರಸಾರವಾಗಲಿದೆ. ಬಿ. ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

‘ಗಂಧದ ಗುಡಿ ಅಪ್ಪು ಕನಸಿನ ಯೋಜನೆಯಾಗಿತ್ತು. ಪರಿಸರ ಸಂರಕ್ಷಣೆಯ ಬಗ್ಗೆ ಏನಾದರೂ ಮಾಡಬೇಕು ಎಂಬ ಆಸೆ ಅವರಲ್ಲಿತ್ತು. ಅವರ ನಿಜವಾದ ವ್ಯಕ್ತಿತ್ವವನ್ನು ಈ ಸಿನಿಮಾ ಅನಾವರಣಗೊಳಿಸುತ್ತದೆ. ಅಪು್ಪ ಅಭಿಮಾನಿಗಳು ಮತ್ತು ಕರ್ನಾಟಕದ ಪ್ರೇಕ್ಷಕರು ಚಿತ್ರವನ್ನು ತುಂಬ ಮೆಚ್ಚಿಕೊಂಡಿದ್ದಾರೆ. ಇದೀಗ ಅವರ ಜನ್ಮದಿನೋತ್ಸವದಂದೇ ಇಡೀ ದೇಶಕ್ಕೆ ತಲುಪಿಸಲಿದ್ದೇವೆ’ ಎಂದು ಅಮೋಘವರ್ಷ ಸಂತಸ ವ್ಯಕ್ತಪಡಿಸುತ್ತಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net