'ಫ್ಯಾಮಿಲಿ ಪ್ಯಾಕ್' ನೋಡಲು ಬಂದ ಪವರ್ ಸ್ಟಾರ್ ಪುನೀತ್ ರಾಜಕುಮಾರ್

Family Pack - Final
Published on

ಬೆಂಗಳೂರು: ಸ್ಟಾರ್ ನಟರು ಇನ್ನೊಬ್ಬರ ಸೆಟ್​ಗೆ ಶೂಟಿಂಗ್ ನೋಡುವುದಕ್ಕೆ ಹೊಸದಲ್ಲ. ಕೆಲವು ತಿಂಗಳುಗಳ ಹಿಂದಷ್ಟೇ, ಮೈಸೂರಿನ ಬಳಿ ನಡೆಯುತ್ತಿದ್ದ ಶ್ರೀಮುರಳಿ ಅಭಿನಯದ 'ಮದಗಜ' ಚಿತ್ರೀಕರಣಕ್ಕೆ ದರ್ಶನ್​ ಭೇಟಿ ಕೊಟ್ಟಿದ್ದರು. ಅಷ್ಟೇ ಅಲ್ಲ, ಮಂಡ್ಯದಲ್ಲಿ ನಡೆಯುತ್ತಿದ್ದ 'ಬ್ಯಾಡ್​ ಮ್ಯಾನರ್ಸ್​' ಚಿತ್ರದ ಚಿತ್ರೀಕರಣಕ್ಕೆ ಅವರು ಎಂಟ್ರಿಕೊಟ್ಟು ಚಿತ್ರತಂಡಕ್ಕೆ ಶುಭಹಾರೈಸಿ ಬಂದಿದ್ದಾರೆ.

ಈಗ್ಯಾಕೆ ಈ ವಿಷಯ ಎಂದರೆ, ಪಿ ಆರ್ ಕೆ ಪ್ರೊಡಕ್ಷನ್ಸ್‌ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ 'ಫ್ಯಾಮಿಲಿ ಪ್ಯಾಕ್' ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಜನವರಿ 21ರಂದು ಮಾತಿನ‌ ಭಾಗದ ಚಿತ್ರೀಕರಣದ ಕೊನೆಯಾಯಿತು. ಅಂದು ಪತ್ನಿ ಅಶ್ವಿನಿ‌ ಅವರೊಂದಿಗೆ ಚಿತ್ರೀಕರಣ ಸ್ಥಳಕ್ಜೆ ಆಗಮಿಸಿದ ಪುನೀತ್ ರಾಜಕುಮಾರ್ ಕಲಾವಿದ‌ರಿಗೆ ಹಾಗೂ ತಂತ್ರಜ್ಞರಿಗೆ ಶುಭ ಕೋರಿದರು.

ನಿರ್ದೇಶಕ ಅರ್ಜುನ್ ಕುಮಾರ್, ಸಂಗೀತ ನಿರ್ದೇಶಕ ಗುರುಕಿರಣ್, ಸಂಭಾಷಣೆ ಬರೆದಿರುವ ಮಾಸ್ತಿ ಹಾಗೂ ಕಲಾವಿದರಾದ ಲಿಖಿತ್ ಶೆಟ್ಟಿ, ಅಮೃತಾ ಅಯ್ಯಂಗಾರ್, ರಂಗಾಯಣ ರಘು, ಅಚ್ಯತ ಕುಮಾರ್, ಸಿಹಿಕಹಿ ಚಂದ್ರು, ಪದ್ಮಜಾರಾವ್, ಶರ್ಮಿತಾ ಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಹಿಂದೆ ಸಂಕಷ್ಟ ಕರ ಗಣಪತಿ ಚಿತ್ರವನ್ನು ನಿರ್ದೇಶಿಸಿದ್ದ‌ ಅರ್ಜುನ್ ಕುಮಾರ್ ಎಸ್ ಈ ನಿರ್ದೇಶಿಸುತ್ತಿದ್ದಾರೆ. ನಿರ್ಮಾಪಕ ಲಿಖಿತ್ ಶೆಟ್ಟಿ ಅವರು ಈ ಚಿತ್ರದ ನಾಯಕ ಕೂಡ. ಅಮೃತ ಅಯ್ಯಂಗಾರ್ 'ಫ್ಯಾಮಿಲಿ ಪ್ಯಾಕ್'ನ ನಾಯಕಿ. ರಂಗಾಯಣ ರಘು, ಅಚ್ಯುತಕುಮಾರ್, ಸಿಹಿಕಹಿ ಚಂದ್ರು, ಪದ್ಮಜಾ ರಾವ್, ಶರ್ಮಿತಾ ಗೌಡ, ನಾಗಭೂಷಣ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಗುರುಕಿರಣ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಉದಯಲೀಲ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನವಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net