More

    ಪುನೀತ್ ರಾಜ್‌ಕುಮಾರ್ ಸಾಮಾಜಿಕ ಕಳಕಳಿ ಅನನ್ಯ

    ಚಿಕ್ಕಮಗಳೂರು: ನಟ ಪುನೀತ್ ರಾಜ್‌ಕುಮಾರ್ ಸರಳ, ಸಜ್ಜನಿಕೆ ಸ್ವಭಾವದವರು. ಎಲ್ಲರೊಂದಿಗೆ ವಿನಯದಿಂದ ಮಾತನಾಡುತ್ತಿದ್ದರು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

    ಜಾಗರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್‌ನಿಂದ ಗಾಳಿಗುಡ್ಡೆ ಗ್ರಾಮದಲ್ಲಿ ನಿರ್ಮಿಸಿದ ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿಯನ್ನು ಭಾನುವಾರ ಅನಾವರಣಗೊಳಿಸಿ ಮಾತನಾಡಿ, ಪುನೀತ್ ರಾಜ್‌ಕುಮಾರ್ ಅವರ ಒಳ್ಳೆಯ ಗುಣಗಳು ಹಾಗೂ ಸಮಾಜದ ಬಗ್ಗೆ ಅವರಿಗಿದ್ದ ಕಳಕಳಿಯ ಅರಿವು ನನಗಿದೆ ಎಂದರು.
    ಪುನೀತ್ ರಾಜ್‌ಕುಮಾರ್ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಫಿ ತೋಟ ಮಾಡಬೇಕೆಂಬ ಆಸೆ ಹೊಂದಿದ್ದರು. ವನ್ಯಜೀವಿ ಹಾಗೂ ಅರಣ್ಯದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದರು. ಹೀಗಾಗಿಯೇ ಚಿಕ್ಕಮಗಳೂರಿಗೆ ಬರಬೇಕು ಎಂಬ ಇಂಗಿತ ವ್ಯಕ್ತಪಡಿಸುತ್ತಿದ್ದರು ಎಂದು ತಿಳಿಸಿದರು.
    ಕನ್ನಡ ಭಾಷೆ ಬೆಳವಣಿಗೆ ಜತೆಗೆ ಜಿಲ್ಲೆಯನ್ನು ಅಭಿವೃದ್ಧಿ ಮಾಡೋಣ. ಗಾಳಿಗುಡ್ಡೆ ಗ್ರಾಮದ ಸರ್ಕಾರಿ ಶಾಲೆ ಅಭಿವೃದ್ಧಿಪಡಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.
    ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಕನ್ನಡ ನಾಡಿನಲ್ಲಿ ಕನ್ನಡ ಭಾಷೆ ಉಳಿವಿಗೆ ಹೋರಾಟ ಮಾಡಬೇಕಾದ ದುರದೃಷ್ಟಕರ ಪರಿಸ್ಥಿತಿ ಬಂದಿದೆ. ಜಿಲ್ಲೆಯಲ್ಲಿ ರಾಷ್ಟ್ರಕವಿ ಕುವೆಂಪು ಸೇರಿದಂತೆ ಹಲವಾರು ಕವಿಗಳು, ಸಾಹಿತಿಗಳು ಜನಿಸಿ ಕನ್ನಡವನ್ನು ಬೆಳೆಸಿದ್ದಾರೆ. ಆದರೆ ಕನ್ನಡ ಶಾಲೆಗಳು ಮುಚ್ಚುತ್ತಿರುವುದರಿಂದ ಕನ್ನಡ ಭಾಷೆ ಬೆಳವಣಿಗೆ ಕುಂಠಿತವಾಗಿದೆ. ಹೀಗಾಗಿ ಪಾಲಕರು ಇಂಗ್ಲಿಷ್ ವ್ಯಾಮೋಹ ಬಿಡಬೇಕು ಎಂದು ಮನವಿ ಮಾಡಿದರು.
    ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಪುನೀತ್ ರಾಜ್‌ಕುಮಾರ್ ಅಂಧಮಕ್ಕಳ ಪಾಠಶಾಲೆ ಸ್ಥಾಪಕರಾಗಿದ್ದಾರೆ. ಮೈಸೂರಿನಲ್ಲಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಉಚಿತ ಹಾಸ್ಟೆಲ್ ವ್ಯವಸ್ಥೆ, ಬಡ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಲು ಹಲವು ಕಾರ್ಯ ಮಾಡಿದ್ದಾರೆ ಎಂದರು.
    ಜಾಗರ ಹೋಬಳಿ ಕಸಾಪ ಅಧ್ಯಕ್ಷ ವಾಸು ಪೂಜಾರಿ, ಶಿರವಾಸೆ ಗ್ರಾಪಂ ಅಧ್ಯಕ್ಷ ರಘುನಾಥ್, ಪ್ರಮುಖರಾದ ಕೆ.ಆರ್.ಚಂದ್ರೇಗೌಡ, ಬಿಸಿಲೇಹಳ್ಳಿ ಸೋಮಶೇಖರ್, ಪಿ.ವಿ.ಲೋಕೇಶ್, ರೇಣುಕಾರಾಧ್ಯ, ಪ್ರಕಾಶ್, ಕೆ.ಆರ್.ಅನಿಲ್‌ಕುಮಾರ್, ಜಾರ್ಜ್ ಆಸ್ಟಿನ್, ಜೆ.ಸಿ.ಲಕ್ಷ್ಮಣ, ಗಾಳಿಗುಡ್ಡೆ ಯೋಗೀಶ್, ನಂಜೇಶ್, ಪ್ರೇಮಾ, ಲೋಕೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts