

ಬೆಂಗಳೂರು: ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ (ಅ.29) ಒಂದು ವರ್ಷ. ಮೊದಲನೇ ವರ್ಷದ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಪುಣ್ಯಭೂಮಿಗೆ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಭೇಟಿ ಕೊಡುತ್ತಿದ್ದಾರೆ.
ಇನ್ನು, ಇಂದು ಬೆಳಿಗ್ಗೆಯೇ ಪುನೀತ್ ಅವರ ಕುಟುಂಬಸ್ಥರು ಮತ್ತು ಆಪ್ತರು ಪುನೀತ್ ಪುಣ್ಯಭೂಮಿಗೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪುನೀತ್ ಅವರ ಪತ್ನಿ ಅಶ್ವಿನಿ, ಸಹೋದರರಾದ ಶಿವರಾಜಕುಮಾರ್, ರಾಘವೇಂದ್ರ ರಾಜಕುಮಾರ್, ಧನ್ಯಾ ರಾಮ್ ಕುಮಾರ್, ಅಮೋಘವರ್ಷ, ಯುವ ರಾಜಕುಮಾರ್, ವಿನಯ್ ರಾಜಕುಮಾರ್ ಸೇರಿದಂತೆ ಹಲವರು ಇದ್ದರು.
ಪುನೀತ್ ಅವರ ಸಮಾಧಿಗೆ ಪ್ರದಕ್ಷಿಣೆ ಹಾಕುವ ವೇಳೆ ಅಶ್ವಿನಿ ಮತ್ತು ಕುಟುಂಬದವರು ಭಾವುಕರಾಗಿ ಕಣ್ಣೀರು ಹಾಕಿದರು. ಆ ನಂತರ ಸಾವಿರಾರು ಸಂಖ್ಯೆಯಲ್ಲಿ ಕಾದಿದ್ದ ಅಭಿಮಾನಿಗಳಿಗೆ ಅಶ್ವಿನಿ ಅವರಿಂದ ಅನ್ನ ಸಂತರ್ಪಣೆಗೆ ಚಾಲನೆ ನೀಡಲಾಯಿತು.