ನಾಡಿನಲ್ಲಿ ಪುನೀತ್ ಹೆಸರು ಎಂದಿಗೂ ಅಮರ

blank

ಬಾಳೆಹೊನ್ನೂರು: ಕನ್ನಡ ನಾಡಿನಲ್ಲಿ ನಟ ಪುನೀತ್ ರಾಜ್‌ಕುಮಾರ್ ಹೆಸರು ಎಂದಿಗೂ ಅಮರವಾಗಿರಲಿದೆ. ಎಂದು ಎನ್.ಆರ್.ಪುರ ತಾಲೂಕು ಚುಸಾಪ ಅಧ್ಯಕ್ಷ ಚೈತನ್ಯ ವೆಂಕಿ ಹೇಳಿದರು.
ಪಟ್ಟಣದ ಕೊಪ್ಪ ರಸ್ತೆಯ ಶುಭವೀರ ಸರ್ವೀಸ್ ಸ್ಟೇಷನ್‌ನಲ್ಲಿ ಮಲೆನಾಡಿನ ಒಳ್ಳೆಯ ಮನಸ್ಸುಗಳ ಒಕ್ಕೂಟ ಆಯೋಜಿಸಿದ್ದ ನಟ ಪುನೀತ್ ರಾಜ್‌ಕುಮಾರ್ ಅವರ ಮೂರನೇ ವರ್ಷದ ಪುಣ್ಯಸ್ಮರಣೆಯಲ್ಲಿ ಮಾತನಾಡಿದರು.
ರಾಜ್ಯದ ಇತಿಹಾಸದಲ್ಲಿಯೇ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಪುನೀತ್ ಅವರು ವಿಶೇಷ ಪ್ರತಿಭೆಯಾಗಿದ್ದಾರೆ. ಅವರು ಕೇವಲ ನಟರಾಗದೇ ಸಮಾಜಮುಖಿ ಕಾರ್ಯಗಳ ಮೂಲಕ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡು ತಮ್ಮ ಕುಟುಂಬದ ಸೇವಾ ಮನೋಭಾವನೆ ಮುಂದುವರಿಸಿದ್ದಾರೆ. ಈ ಮೂಲಕ ತಮ್ಮ ಮೇರು ವ್ಯಕ್ತಿತ್ವವನ್ನು ಬೆಳೆಸಿಕೊಂಡು ಪ್ರತಿಯೊಬ್ಬ ಮನದಲ್ಲೂ ಸದಾ ಹಚ್ಚ ಹಸುರಾಗಿ ಉಳಿದಿದ್ದಾರೆ ಎಂದರು.
ತಾಲೂಕು ಕಸಾಪ ಪ್ರಧಾನ ಕಾರ್ಯದರ್ಶಿ ಸತೀಶ್ ಅರಳೀಕೊಪ್ಪ, ಜೇಸಿಐ ಅಧ್ಯಕ್ಷ ಎನ್.ಶಶಿಧರ್, ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಬಿ.ಎಸ್.ನಾಗರಾಜ್‌ಭಟ್, ಪ್ರೌಢಶಾಲಾ ಶಿಕ್ಷಕರಾದ ಸಂಘದ ಅಧ್ಯಕ್ಷ ಕೆ.ಎಂ.ರಾಘವೇಂದ್ರ, ಉಪನ್ಯಾಸಕ ಸೋಮೇಶ್‌ಗೌಡ, ಪ್ರಕಾಶ್ ಮುದುಗುಣಿ, ಕೆ.ಪ್ರಸಾದ್, ಸತೀಶ್ ಕಾಮತ್, ರಾಜೇಶ್ ಬನ್ನೂರು, ರಿಚರ್ಡ್ ಮಥಾಯಿಸ್, ಸನತ್ ಶೆಟ್ಟಿ, ಹುಸೇನ್, ಚಂದ್ರಶೇಖರ್ ಬಾಬ್ಲಿ, ಸಾರ್ಥಕ್, ಮಿಷಾ, ಮಿಶಿಕಾ ಮತ್ತಿತರರು ಹಾಜರಿದ್ದರು.

Share This Article

ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…

ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips

ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…

Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?

ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…