More

    ಬಾಲ ಕಾರ್ವಿುಕರ ಕೆಲಸಕ್ಕೆ ನೇಮಿಸಿಕೊಂಡರೆ ಶಿಕ್ಷೆ, ದಂಡ

    ನವಲಗುಂದ: ಪಟ್ಟಣದಲ್ಲಿರುವ ಅಂಗಡಿ, ವಾಣಿಜ್ಯ ಸಂಸ್ಥೆಗಳಾದ ಹೋಟೆಲ್, ಬೇಕರಿ, ಗ್ಯಾರೇಜ್, ಬಾರ್ ಮತ್ತು ರೆಸ್ಟೋರೆಂಟ್ ಇತರೆ ಅಂಗಡಿ-ಮುಂಗಟ್ಟುಗಳಲ್ಲಿ 18 ವರ್ಷದ ಒಳಗಿನ ಬಾಲ ಕಾರ್ವಿುಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನು ಬಾಹಿರ. ಅಂತಹ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದು, ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕ್ಕೆ ಕರೆ ಮಾಡಿದರೆ ಅಂತಹ ಬಾಲಕರನ್ನು ರಕ್ಷಿಸಬಹುದು ಎಂದು ತಹಸೀಲ್ದಾರ್ ಸುಧೀರ ಸಾಹುಕಾರ ಹೇಳಿದರು.

    ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ಬಾಲ ಕಾರ್ವಿುಕ ನಿಮೂಲನೆ ಮತ್ತು ಪುನರ್ವಸತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ ಕಾರ್ವಿುಕ ಮಕ್ಕಳನ್ನು ನೇಮಿಸಿಕೊಂಡ ಮಾಲೀಕರಿಗೆ 20 ಸಾವಿರದಿಂದ 50 ಸಾವಿರ ರೂಗಳವರೆಗೆ ದಂಡ ಹಾಗೂ 6 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆಗೆ ಗುರಿಯಾಗಬಹುದು. ಕಲಂ 17ರ ಅಡಿ ನೇಮಕಗೊಂಡ ಕಾರ್ವಿುಕ ನಿರೀಕ್ಷಕರು ತಪಾಸಣೆ ಕೈಗೊಳ್ಳಬೇಕು. ಸಮಿತಿ ಸದಸ್ಯರು ಹಾಗೂ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮಕ್ಕಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.

    ಬಾಲ ಕಾರ್ವಿುಕ ಜಿಲ್ಲಾ ಯೋಜನಾ ನಿರ್ದೇಶಕ ಬಸವರಾಜ ಪಂಚಾಕ್ಷರಿಮಠ, ಹಿರಿಯ ಕಾರ್ವಿುಕ ನಿರೀಕ್ಷಕ ಅಕ್ರಂ ಅಲ್ಲಾಪೂರ, ಸಮಾಜ ಕಲ್ಯಾಣ ಅಧಿಕಾರಿ ಕಪಿಲಾ ಎಲೂಗಿ, ಆರೋಗ್ಯ ಇಲಾಖೆ, ತಾಲೂಕು ಪಂಚಾಯಿತಿ, ಪೊಲೀಸ್ ಇಲಾಖೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಸೀಲ್ದಾರ್ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts