More

    ಯಾರಿಗೆ ಪಂಚರಾಜ್ಯ? ಮತಎಣಿಕೆ ಆರಂಭ, ಉ. ಪ್ರದೇಶದಲ್ಲಿ ಬಿಜೆಪಿ, ಪಂಜಾಬ್​ನಲ್ಲಿ ಆಪ್​ಗೆ ಮುನ್ನಡೆ

    ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆ ಹಾಗೂ 2024ರ ಲೋಕಸಭೆ ಚುನಾವಣೆ ದೃಷ್ಟಿಯಿಂದ ವಿಶೇಷ ಮಹತ್ವ ಹೊಂದಿರುವ ಉತ್ತರ ಪ್ರದೇಶ, ಪಂಜಾಬ್​, ಗೋವಾ, ಮಣಿಪುರ ಮತ್ತು ಉತ್ತರಾಖಂಡ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಬೆಳಗ್ಗೆ 8 ಗಂಟೆಗೆ ಮತಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ.

    ಮತ ಎಣಿಕೆಯ ಆರಂಭದಲ್ಲೇ ಉತ್ತರ ಪ್ರದೇಶದಲ್ಲಿ ಬಿಜೆಪಿ 90 ಅಧಿಕ ಸ್ಥಾನಗಳಿಂದ ಮುನ್ನಡೆ ಸಾಧಿಸಿದರೆ, ಸಮಾಜವಾದಿ ಪಕ್ಷ 60ಕ್ಕೂ ಅಧಿಕ ಸ್ಥಾನಗಳೊಂದಿಗೆ ಎರಡನೇ ಸ್ಥಾನವನ್ನು ಕಾಯ್ದುಕೊಂಡಿದೆ. ಉಳಿದಂತೆ ಕಾಂಗ್ರೆಸ್​ 2 ಸ್ಥಾನಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಉತ್ತರಾಖಂಡದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್​ ಎರಡನೇ ಸ್ಥಾನದಲ್ಲಿದೆ.

    ಪಂಜಾಬ್​ನಲ್ಲಿ ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್​ ಇದೀಗ ಎರಡನೇ ಸ್ಥಾನಕ್ಕೆ ಕುಸಿದ್ದು, ಆಮ್​ ಆದ್ಮಿ ಪಕ್ಷ ಮುನ್ನಡೆ ಸಾಧಿಸಿದೆ. ಮೂರನೇ ಸ್ಥಾನದಲ್ಲಿ ಬಿಜೆಪಿ ಇದೆ.

    ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ..

    ಯಾರಿಗೆ ಪಂಚರಾಜ್ಯ?; ತಜ್ಞರ ವಿಶ್ಲೇಷಣೆ ಒಳಗೊಂಡ ಫಲಿತಾಂಶದ ಕ್ಷಣ ಕ್ಷಣ ಮಾಹಿತಿಯ ನೇರಪ್ರಸಾರ ಇಲ್ಲಿದೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts