ಕನ್ನಡ ಜ್ಯೋತಿ ರಥಯಾತ್ರೆಗೆ ಪೂರ್ಣಕುಂಭ ಸ್ವಾಗತ

blank

ತರೀಕೆರೆ: ಬೀರೂರಿನಿಂದ ಪಟ್ಟಣದ ಕೋಡಿಕ್ಯಾಂಪ್‌ಗೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ವಿವಿಧ ಕಲಾ ತಂಡಗಳೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪೂರ್ಣಕುಂಭ ಹೊತ್ತು ಸ್ವಾಗತಿಸಿದರು.
ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು, ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಪರ ಸಂಘಟನೆ ಪದಾಧಿಕಾರಿಗಳು ಮೆರವಣಿಗೆ ಹೊರಟ ಕನ್ನಡ ಜ್ಯೋತಿ ರಥಯಾತ್ರೆ ಜತೆ ಹೆಜ್ಜೆ ಹಾಕಿ ಮಹಾತ್ಮ ಗಾಂಧಿ ವೃತ್ತದಲ್ಲಿ ಪುಷ್ಪ ನಮನ ಸಲ್ಲಿಸಿ ರಥದಲ್ಲಿರುವ ಭುವನೇಶ್ವರಿ ದೇವಿಗೆ ಮಾಲಾರ್ಪಣೆ ಮಾಡಿದರು.
ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿ ಲಭಿಸಿರುವುದು ನಾಡಿಗೆ ಹೆಮ್ಮ. ಕನ್ನಡ ಸಾಹಿತ್ಯ ಪರಿಷತ್ ಜತೆ ವಿವಿಧ ಕನ್ನಡ ಪರ ಸಂಘಟನೆಗಳು ಭಾಷೆ ಉಳಿಸುವ ಪ್ರಯತ್ನ ಮಾಡುತ್ತಿವೆ. ತಾಯಿ ಭಾಷೆಯನ್ನು ಗೌರವಿಸುವ ಜತೆಗೆ ಮನೆ, ಮನೆಯಲ್ಲಿ ಪಸರಿಸುವಂತೆ ಮಾಡಿ ನಿತ್ಯೋತ್ಸವಗೊಳಿಸಬೇಕು ಎಂದರು.
ಎಸಿ ಡಾ.ಕೆ.ಜೆ.ಕಾಂತರಾಜ್ ಮಾತನಾಡಿ, ಸುದೀರ್ಘ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಅನೇಕ ಸಾಧು ಸಂತರು ನಿರಂತರ ಬಳಸಿ ಉಳಿಸಿದ್ದು, ಭಾಷೆ ಪ್ರೀತಿಸಿ ವಿಸ್ತಾರಗೊಳಿಸುವ ಹೊಣೆ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.
ಪುರಸಭೆ ಅಧ್ಯಕ್ಷ ವಸಂತ್‌ಕುಮಾರ್, ಉಪಾಧ್ಯಕ್ಷೆ ಎಂ.ಗಿರಿಜಾ, ತಹಸೀಲ್ದಾರ್ ವಿಶ್ವಜಿತ ಮೆಹತಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿ ದಳವಾಯಿ, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್, ಜೆಡಿಎಸ್ ತಾಲೂಕು ಅಧ್ಯಕ್ಷ ಎಂ.ನರೇಂದ್ರ, ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಟಿ.ಎನ್.ಜಗದೀಶ್ ಮತ್ತಿತರರಿದ್ದರು.

Share This Article

ಆಯುಷ್ಯ ಇರುವಾಗ ಸಾಯುವವರೆಗೆ ಬದುಕಲೇಬೇಕಲ್ಲ!

| ಡಾ.ಕೆ.ಪಿ. ಪುತ್ತೂರಾಯ ಇದು ಸಹಿಸಿಕೊಳ್ಳಲಾಗದ ವೃದ್ಯಾಪಕ್ಕೆ ಒಳಗಾಗಿ ಸಾಯಲಾಗದೆ ಸಾವಿನ ಕ್ಷಣವನ್ನೇ ಎದುರು ನೋಡುತ್ತಿರುವ…

ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips

ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…

ಉಸಿರಾಟದ ವ್ಯಾಯಾಮ ಗೊರಕೆ ಸಮಸ್ಯೆಗೆ ಪರಿಹಾರ; ಇದು ಸುಳ್ಳೋ-ಸತ್ಯವೋ.. ವೈದ್ಯರು ಹೇಳೋದೇನು? | Health Tips

ನಿದ್ರಿಸುವಾಗ ಗೊರಕೆ ಹೊಡೆಯುವ ವ್ಯಕ್ತಿಗೆ ಮಾತ್ರವಲ್ಲದೆ ಸುತ್ತಮುತ್ತಲಿನವರಿಗೂ ತೊಂದರೆಯ ಅನುಭವವಾಗುತ್ತದೆ. ಸಾಮಾನ್ಯವಾಗಿ ಇದನ್ನು ಲಘುವಾಗಿ ತೆಗೆದುಕೊಳ್ಳಲಾಗುತ್ತದೆ.…