More

    ಬಿಜೆಪಿ ತೊರೆದು ಕೈ ಹಿಡಿದ ಪೂರ್ಣಿಮಾ

    ಬೆಂಗಳೂರು: ಹಿರಿಯೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕಿ, ಬಿಜೆಪಿಯ ಪೂರ್ಣಿಮಾ ಶ್ರೀನಿವಾಸ್ ಶುಕ್ರವಾರ ಕಾಂಗ್ರೆಸ್ ಸೇರ್ಪಡೆಗೊಂಡರು.
    ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರು ಪೂರ್ಣಿಮಾ ಮತ್ತು ಅವರ ಕ್ಷೇತ್ರದ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡರು.
    ಈ ವೇಳೆ ಮಾತನಾಡಿದ ಅವರು, ನಮ್ಮ ಕುಟುಂಬವನ್ನು ಎ.ಕೃಷ್ಣಪ್ಪ ಅವರ ಕುಟುಂಬ ಎಂದು ಗುರುತಿಸುತ್ತಾರೆ. ನನ್ನನ್ನು ಕಾಂಗ್ರೆಸ್ ಕೃಷ್ಣಪ್ಪ ಅವರ ಮಗಳು ಎಂದು ಗುರುತಿಸುತ್ತಾರೆ. ಎಲ್ಲರ ಅಪೇಕ್ಷೆ ಮೇರೆಗೆ ಇಂದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದರು.
    ನಮ್ಮ ಸೇರ್ಪಡೆಯಿಂದ ಪಕ್ಷಕ್ಕೂ ಅನುಕೂಲವಾಗಬೇಕು. ನಮ್ಮದೇ ರೀತಿಯಲ್ಲಿ ಅನೇಕ ಹಿಂದುಳಿದ ವರ್ಗದ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಸಿಗುವಂತಾಗಬೇಕು. ಆಗ ಪಕ್ಷಕೂಡ ಬಲಿಷ್ಠವಾಗುತ್ತದೆ ಎಂದ ಅವರು ನಾನು ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಸೇರಿದ್ದೇನೆ. ಅನೇಕರು ನನಗೆ ನಿನ್ನಲ್ಲಿ ಇನ್ನು ಕಾಂಗ್ರೆಸ್ ರಕ್ತವಿದೆ ಎಂದು ಹೇಳುತ್ತಿದ್ದರು. ಅದೇ ನನ್ನನ್ನು ಇಂದು ಮತ್ತೆ ಕಾಂಗ್ರೆಸ್ ಪಕ್ಷದತ್ತ ಕರೆತಂದಿದೆ ಎಂದು ಹೇಳಿದರು.
    ನಾವು ಎಲ್ಲಿ ಕೆಲಸ ಮಾಡುತ್ತೇವೋ ಅಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ನಮ್ಮ ತಂದೆ ನನಗೆ ಹೇಳಿಕೊಟ್ಟಿದ್ದಾರೆ. ಮತ್ತೆ ಕಾಂಗ್ರೆಸ್ ನಿಂದ ಮತ್ತೊಂದು ಪಯಣ ಆರಂಭಿಸುತ್ತಿದ್ದೇನೆ ಎಂದರು.
    ಡಿ.ಕೆ ಶಿವಕುಮಾರ್ ಮಾತನಾಡಿ, ನಾವು ಎ.ಕೃಷ್ಣಪ್ಪ ಅವರ ಜತೆಯಲ್ಲಿ ಬೆಂಗಳೂರು ಜಿಲ್ಲೆಯಲ್ಲಿ ಒಟ್ಟಾಗಿ ರಾಜಕಾರಣ ಮಾಡಿದವರು. ನಮ್ಮ ತಪ್ಪುಗಳಿಂದ ಅವರ ಜತೆಗಿನ ಕೊಂಡಿ ಕಳಚಿತ್ತು. ಕೃಷ್ಣಪ್ಪ ಅವರ ಪುತ್ರಿ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ಇಂದು ಮತ್ತೆ ಆ ಕೊಂಡಿ ಬೆಸೆದುಕೊಂಡಿದೆ ಎಂದರು.
    ನಾನು ಬಹಳ ದಿನಗಳಿಂದ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಗಾಳ ಹಾಕುತ್ತಿದ್ದೆ. ಪೂರ್ಣಿಮಾ ಅವರು ಪಕ್ಷಕ್ಕೆ ಬಾರದಿದ್ದಾಗ, ಅವರ ಪತಿ ಶ್ರೀನಿವಾಸ್‌ಗೆ ಗಾಳ ಹಾಕಿದ್ದೆ. ಬೇರೆ ಲೆಕ್ಕಾಚಾರದಿಂದ ಇಷ್ಟು ದಿನ ಅವರು ಪಕ್ಷ ಸೇರಿರಲಿಲ್ಲ. ಇಂದು ಕೇವಲ ಪೂರ್ಣಿಮಾ ಹಾಗೂ ಶ್ರೀನಿವಾಸ್ ಇವರಿಬ್ಬರು ಮಾತ್ರ ಪಕ್ಷ ಸೇರುತ್ತಿಲ್ಲ. ರಾಜ್ಯದ ಪ್ರವರ್ಗ 1ರ ಜಾತಿಯ ಒಕ್ಕೂಟ, ರಾಜ್ಯ ಗೊಲ್ಲ ಯಾದವ ಸಂಘ ಸೇರಿದಂತೆ ಅನೇಕ ಸಂಘಟನೆಗಳ 4-5 ಸಾವಿರ ಕಾರ್ಯಕರ್ತರು ಪಕ್ಷ ಸೇರುತ್ತಿದ್ದಾರೆ ಎಂದು ಹೇಳಿದರು.
    ಪೂರ್ಣಿಮಾ ಶ್ರೀನಿವಾಸ್ ಜತೆ ಮಾಜಿ ಕಾರ್ಪೊರೇಟರ್ ನರಸಿಂಹ ನಾಯಕ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಸೇರುವವರ ದೊಡ್ಡ ಪಟ್ಟಿ ಇದೆ. ಅದನ್ನು ಈಗ ಬಹಿರಂಗಪಡಿಸುವುದಿಲ್ಲ. ಒಬ್ಬೊಬ್ಬರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಈ ಪ್ರಕ್ರಿಯೆ ಇಲ್ಲಿಗೆ ನಿಲ್ಲಬಾರದು. ಪ್ರತಿ ಬೂತ್ ಹಾಗೂ ಹಳ್ಳಿಗಳಲ್ಲಿ ಇದೇ ರೀತಿ ಕಾರ್ಯಕ್ರಮಗಳನ್ನು ಮಾಡಿ ಅಲ್ಲಿನ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದರು.
    ಸಿಎಂ ಸಿದ್ದರಾಮಯ್ಯ ಮಾತನಾಡಿ, ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿಯಲ್ಲಿದ್ದರು. ಈಗ ಕಾಂಗ್ರೆಸ್‌ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಹೇಳಿದರು.
    ಕಾಂಗ್ರೆಸ್ ಸಾಮಾಜಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts