ಹೈದರಾಬಾದ್: ಭಾರತ ಸೇರಿದಂತೆ ಜಗತ್ತಿನ ಮೂಲೆ ಮೂಲೆಯಲ್ಲೂ ಅಲ್ಲು ಅರ್ಜುನ್‌ಗೆ ಫ್ಯಾನ್ಸ್ ಇದ್ದಾರೆ. ಇವರೆಲ್ಲಾ ಪುಷ್ಪ-2 ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಕೊಂಡಿದ್ದಾರೆ. ಹತ್ತಿರ ಹತ್ತಿರ 2 ವರ್ಷದಿಂದ ಪುಷ್ಪ-2 ಸಿನಿಮಾಗೆ ಕಾಯುತ್ತಿದ್ದಾರೆ. ಹೀಗಾಗಿ ಅವರಿಗೆ ಸಿಹಿಸುದ್ದಿ ನೀಡಲು ಅಲ್ಲು ಅರ್ಜುನ್ ಹಗಲು, ರಾತ್ರಿ ಲೆಕ್ಕಿಸದೆ ಶೂಟಿಂಗ್ ನಡೆಸುತ್ತಿದ್ದಾರೆ. ಪುಷ್ಪ-2 ರಿಲೀಸ್ ಡೇಟ್ ಕೂಡ ಫೈನಲ್ ಆಗಿದೆ.
ಇದನ್ನೂ ಓದಿ:ಹನುಮಾನ್ ಒಟಿಟಿ ರಿಲೀಸ್ ಕನ್ಫರ್ಮ್? ಎಲ್ಲಿ ಯಾವಾಗ ಗೊತ್ತಾ?
ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಆಗಸ್ಟ್ 15, 2024 ರಂದು ಬಹು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಅಧಿಕೃತ ಪೋಸ್ಟರ್ ಅನ್ನು ನಿರ್ಮಾಪಕರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
2024ರ ಬಹುನಿರೀಕ್ಷಿತ ಸಿನಿಮಾ ‘ಪುಷ್ಪ 2’ ತೆರೆ ಮೇಲೆ ಬರಲು ಕೇವಲ 200 ದಿನಗಳು ಮಾತ್ರ ಬಾಕಿ ಇದೆ. ನಿರ್ಮಾಣ ಸಂಸ್ಥೆ, ಮೈತ್ರಿ ಮೂವಿ ಮೇಕರ್ಸ್ ಸಿನಿಮಾ ರಿಲೀಸ್ ಡೇಟ್ ಘೋಷಿಸಿದೆ. ಪುಷ್ಪ: ದಿ ರೂಲ್ 15 ಆಗಸ್ಟ್ 2024 ರಂದು ವಿಶ್ವದಾದ್ಯಂತ ಗ್ರ್ಯಾಂಡ್ ರಿಲೀಸ್ಗೆ ಸಿದ್ಧವಾಗಿದೆ. ಬನ್ನಿ ಅಭಿಮಾನಿಗಳು ಈ ಘೋಷಣೆಗಾಗಿಯೇ ಕಾಯುತ್ತಿದ್ದರು. 500 ಕೋಟಿ ಬಜೆಟ್ ನಲ್ಲಿ ಚಿತ್ರ ತಯಾರಾಗುತ್ತಿದ್ದು, ಹಲವು ಹೊಸ ತಂತ್ರಜ್ಞಾನಗಳನ್ನು ಸಿನಿಮಾದಲ್ಲಿ ಬಳಸಿಕೊಳ್ಳಬೇಕಿದೆ.
ಅಲ್ಲು ಅರ್ಜುನ್ ನಟನೆಯ ಪುಷ್ಪ-2 ಬಿಡುಗಡೆ ದಿನಾಂಕ ಈ ಹಿಂದೆಯೇ ಫಿಕ್ಸ್ ಆಗಿತ್ತು. ಸ್ವಾತಂತ್ರ್ಯ ದಿನದಂದು ಅಂದರೆ ಆಗಸ್ಟ್ 15ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ ಎಂದು ಸ್ಪೆಷಲ್ ಪೋಸ್ಟರ್ ಮೂಲಕ ಚಿತ್ರತಂಡ ರಿಲೀಸ್ ಡೇಟ್ ಘೋಷಿಸಿತ್ತು. ಫ್ಯಾನ್ಸ್ ಪುಷ್ಪ ಸೀಕ್ವೆಲ್ ನೋಡೋದಿಕ್ಕೆ ಎಕ್ಸೈಟ್ ಆಗಿದ್ದರು. ಇದೀಗ ರಿಲೀಸ್ ಡೇಟ್ ಮುಂದೆ ಹೋಗಿದೆ ಎಂದು ಸುದ್ದಿಯನ್ನು ಹರಿಬಿಡಲಾಗಿದೆ. ಅಂದು ಜ್ಯೂನಿಯರ್ ಎನ್.ಟಿ.ಆರ್ ನಟನೆಯ ದೇವರ ಸಿನಿಮಾ ಬರಲಿರುವ ಕಾರಣ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಗಿದೆ ಅಂತ ಸುದ್ದಿ ಆಗಿತ್ತು.
200 DAYS for Pushpa Raj to begin his RULE 🔥🔥#Pushpa2TheRule Grand Release Worldwide on 15th AUG 2024 ❤🔥#PushpaKaRuleIn200Days 💥💥
Icon Star @alluarjun @iamRashmika #FahadhFaasil @aryasukku @ThisIsDSP @SukumarWritings @TSeries pic.twitter.com/RxUDlkdrpB
— Mythri Movie Makers (@MythriOfficial) January 29, 2024
ಬಾಲಿವುಡ್ ಚಿತ್ರಗಳಿಗೆ ಟಕ್ಕರ್ ಕೊಟ್ಟಿದ್ದ ಪುಷ್ಪ 2ಗಾಗಿ ಬಂಗಾರದ ಬೇಡಿಕೆ ಬಂದಿದೆ. 200 ಕೋಟಿ ಮೊತ್ತಕ್ಕೆ ಹಿಂದಿ ರೈಟ್ಸ್ ಮಾರಾಟವಾಗಿದ್ದು, 75 ಕೋಟಿಗೆ ಆಡಿಯೋ ರೈಟ್ಸ್ ಸೇಲ್ ಆಗಿರುವ ಬಗ್ಗೆ ಸಿನಿ ಜಜಾರ್ ನಲ್ಲಿ ಹೊಸ ಬಜ್ ಓಡಾಡ್ತಿದೆ. ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದಲ್ಲಿ ಅದ್ಧೂರಿಯಾಗಿ ತಯಾರಾಗ್ತಿರುವ ಪುಷ್ಪ-2 ಸಿನಿಮಾಗೆ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ.
ರಶ್ಮಿಕಾ & ಅಲ್ಲು ಅರ್ಜುನ್ ಜೋಡಿಯ, ಬಹು ನಿರೀಕ್ಷಿತ ಸಿನಿಮಾಗೆ ಫ್ಯಾನ್ಸ್ ಕೂಡ ಕಾಯುತ್ತಿದ್ದಾರೆ. ‘ಪುಷ್ಪ-1’ ಮೂಲಕ ಗಲ್ಲಾಪೆಟ್ಟಿಗೆ ಕೊಳ್ಳೆ ಹೊಡೆದಿದ್ದು, ಹತ್ತಾರು ದಾಖಲೆ ಬರೆದಿದ್ದ ರಶ್ಮಿಕಾ ಹಾಗೂ ಅಲ್ಲು ಅರ್ಜುನ್ ಮತ್ತೆ ಬೆಳ್ಳಿ ತೆರೆ ಮೇಲೆ ಅಬ್ಬರಿಸಲು ಸಜ್ಜಾಗಿದ್ದಾರೆ. ‘ಪುಷ್ಪ-2’ ರಿಲೀಸ್‌ಗೆ ಕೌಂಟ್‌ಡೌನ್ ಶುರುವಾಗಿದೆ.
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಫ್ಯಾನ್ಸ್ ಬೆಳ್ಳಿತೆರೆ ಮೇಲೆ ಸಿನಿಮಾ ಕಣ್ತುಂಬಿಕೊಳ್ಳಲು ಕೇವಲ 200 ದಿನಗಳ ಕಾಲ ಕಾಯಬೇಕಿದೆ ಅಷ್ಟೇ.
ಡ್ರಗ್ಸ್ ಸಮೇತ ಸಿಕ್ಕಿಬಿದ್ದ ಟಾಲಿವುಡ್ ನಾಯಕನ ಗೆಳತಿ ! ಕೋರ್ಟ್ಗೆ ಹಾಜರುಪಡಿಸಿದ ಪೊಲೀಸರು