Pushpa 2 : ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಸಿನಿಮಾ ಇನ್ನು ಕೆಲವೇ ಗಂಟೆಗಳಲ್ಲಿ ಥಿಯೇಟರ್‌ಗೆ ಅಪ್ಪಳಿಸಲಿದೆ. ಸುಮಾರು 3 ವರ್ಷಗಳ ಬಳಿಕ ನೆಚ್ಚಿನ ನಟನನ್ನು ಬೆಳ್ಳಿ ಪರದೆಯ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಈಗಾಗಲೇ ಥಿಯೇಟರ್ ಮುಂದೆ ಅಭಿಮಾನಿಗಳ ಸಂಭ್ರಮಾಚರಣೆಯ ಸಿದ್ಧತೆ ನಡೆಯುತ್ತಿದೆ. ಇದರ ನಡುವೆ ಈ ಸಿನಿಮಾ ಬಗ್ಗೆ ಬಿಜೆಪಿ ಶಾಸಕರೊಬ್ಬರು ಶಾಕಿಂಗ್ ಕಾಮೆಂಟ್ ಮಾಡಿದ್ದಾರೆ.
ಪುಷ್ಪ ಸಿನಿಮಾದಲ್ಲಿ ತೋರಿಸಿರುವುದೆಲ್ಲ ಸುಳ್ಳು. ಕೆಂಪು ಚಂದನದ ಮೌಲ್ಯ ಕೇವಲ ಒಂದು ಲಕ್ಷ ರೂಪಾಯಿ. ಆದರೆ, ಸಿನಿಮಾದಲ್ಲಿ ಒಂದು ಕೋಟಿ ರೂಪಾಯಿ ಎಂದು ತೋರಿಸಲಾಗಿದೆ. ಇದರಿಂದ ಯುವಕರು ಹಲವು ಮರಗಳನ್ನು ಈಗಾಗಲೇ ಕಡಿದಿದ್ದಾರೆ. ಇನ್ನು ‘ಪುಷ್ಪ 2’ ಚಿತ್ರದ ಬಳಿಕ ಎಷ್ಟು ಮರಗಳನ್ನು ಕತ್ತರಿಸುತ್ತಾರೋ? ಪುಷ್ಪ ಸಿನಿಮಾದಿಂದ ಯುವಕರು ಭ್ರಷ್ಟರಾಗುತ್ತಿದ್ದಾರೆ. ಅಲ್ಲು ಅರ್ಜುನ್ ಮತ್ತು ಸುಕುಮಾರ್ ಅವರನ್ನು ಬಂಧಿಸಿ ಜೈಲಿಗೆ ಹಾಕಬೇಕು ಎಂದು ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಅರ್ಮುರ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಕೇಶ್ ರೆಡ್ಡಿ ಅವರು ಮಾಡಿರುವ ಕಾಮೆಂಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಶಾಸಕ ರಾಕೇಶ್ ರೆಡ್ಡಿ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗುತ್ತಿವೆ. ಅದರಲ್ಲೂ ಅಲ್ಲು ಅರ್ಜುನ್ ಅಭಿಮಾನಿಗಳು ಶಾಸಕರ ವಿರುದ್ಧ ಕಿಡಿಕಾರುತ್ತಿದ್ದಾರೆ. ಸಾಕಷ್ಟು ಟೀಕೆಗಳ ನಡುವೆಯೂ ಪುಷ್ಪ 2 ಸಿನಿಮಾದ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ.
ಪುಷ್ಪ 2: ದಿ ರೂಲ್, 2021ರ ಬ್ಲಾಕ್‌ಬಸ್ಟರ್ ಪುಷ್ಪ: ದಿ ರೈಸ್‌ನ ಬಹು ನಿರೀಕ್ಷಿತ ಸಿನಿಮಾದ ಮುಂದಿನ ಭಾಗವಾಗಿದೆ. ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದು, ಸುಕುಮಾರ್ ನಿರ್ದೇಶನ ಮಾಡಿದ್ದಾರೆ. ಇದೇ ಡಿಸೆಂಬರ್ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮೊದಲ ಭಾಗದ ಯಶಸ್ಸಿನಿಂದಾಗಿ ಈ ಸಿನಿಮಾ ಭಾರಿ ಕ್ರೇಜ್ ಹುಟ್ಟುಹಾಕಿದೆ. (ಏಜೆನ್ಸೀಸ್)
ಈತ ಏನಾದ್ರೂ ಐಪಿಎಲ್ ಹರಾಜಿಗೆ ಬಂದ್ರೆ 520 ಕೋಟಿ ಕೂಡ ಸಾಕಾಗಲ್ಲ! ಆಶಿಶ್ ನೆಹ್ರಾ ಅಚ್ಚರಿ ಹೇಳಿಕೆ | Ashish Nehra
ಏನಿದು ಕೊನೇ ಕ್ಷಣದ ಟ್ವಿಸ್ಟ್? ಪುಷ್ಪ-2 ಸಿನಿಮಾ ಟಿಕೆಟ್ ಬುಕ್ಕಿಂಗ್ ಮಾಡಿರುವವರಿಗೆ ಬಿಗ್ ಶಾಕ್! Pushpa 2