More

    ಶಾಲಾ ಕಟ್ಟಡ ಧ್ವಂಸಕ್ಕೆ ಬ್ರೇಕ್ ಹಾಕಿ

    ಶಿವಮೊಗ್ಗ: ನ್ಯಾಯಾಲಯದ ಆದೇಶ ಉಲ್ಲಂಸಿ ಖಾಸಗಿ ಆಂಗ್ಲ ಮಾಧ್ಯಮ ಶಾಲಾ ಕಟ್ಟಡವನ್ನು ಧ್ವಂಸ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಪಾಲಕರು ಶನಿವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಿದರು.

    ನ್ಯೂಮಂಡ್ಲಿ ಗ್ರಾಮದ ಸರ್ವೇ ನಂ.186/1ರಲ್ಲಿ 20 ಗುಂಟೆ ಜಾಗವು ಶಾಲೆ ಹೆಸರಿಗೆ ನೋಂದಾಯಿಸಲ್ಪಟ್ಟಿದೆ. ಕಳೆದ 20 ವರ್ಷಗಳಿಂದ ಶಾಲೆ ನಡೆಸಿಕೊಂಡು ಬರಲಾಗುತ್ತಿದೆ. ಶಾಲೆ ಜಾಗದ ಬಗ್ಗೆ ದಾವೆ ನ್ಯಾಯಾಲಯದಲ್ಲಿದ್ದು, ಕೋರ್ಟ್‌ನ ಆದೇಶ ಉಲ್ಲಂಸಿ ಶಾಲಾ ಕಟ್ಟಡವನ್ನು ಜೆಸಿಬಿ ಮೂಲಕ ಒಡೆದುಹಾಕಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಶಾಲೆಯಲ್ಲಿ 350 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಅದರಲ್ಲೂ ಮಕ್ಕಳು ಪಬ್ಲಿಕ್ ಪರೀಕ್ಷೆ ಬರೆಯಬೇಕಾಗಿದೆ. ಆದ್ದರಿಂದ ಪರೀಕ್ಷೆ ಮುಗಿಯುವವರೆಗೂ ಕಟ್ಟಡ ಬೀಳಿಸದಂತೆ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಧಿಕಾರಿಗೆ ಒತ್ತಾಯಿಸಿದರು.
    5, 8, 9 ಮತ್ತು ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆ ಸೋಮವಾರ ಆರಂಭವಾಗಲಿದ್ದು, ಈ ಶಾಲೆಯಲ್ಲಿ 28 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ತೆರವು ಕಾರ್ಯಾಚರಣೆಯನ್ನು ಪರೀಕ್ಷೆ ಮುಗಿಯುವವರೆಗೆ ಮುಂದೂಡಲು ಪಾಲಿಕೆ ಆಯುಕ್ತರನ್ನು ಸಂಪರ್ಕಿಸುವಂತೆ ಶಾಲಾ ಆಡಳಿತ ಮಂಡಳಿ ಹಾಗೂ ಡಿಡಿಪಿಐಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts