More

    ಮರಳು ದಂಧೆಗೆ ಹಾಕಿ ಕಡಿವಾಣ

    ಶಿವಮೊಗ್ಗ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಣೆ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಪದಾಧಿಕಾರಿಗಳು ಮಂಗಳವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಶಿವಮೊಗ್ಗ ತಾಲೂಕಿನ ಹಾಡೋನಹಳ್ಳಿ, ಕೆಳಗಿನ ಹನಸವಾಡಿ, ಗುರುಪುರ, ಪಿಳ್ಳಂಗೆರೆ, ಸಕ್ರೆಬೈಲು, ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ, ಮಾಳೂರು ಮುಂತಾದ ಕಡೆಗಳಲ್ಲಿ ಮರಳು ದಂಧೆ ವ್ಯಾಪಕವಾಗಿದೆ. ರಾತ್ರೋರಾತ್ರಿ ಮರಳು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
    ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅಕ್ರಮಕ್ಕೆ ಬ್ರೇಕ್ ಹಾಕಬೇಕು. ನಾಗರಿಕರಿಗೆ ಕಡಿಮೆ ದರದಲ್ಲಿ ಮರಳು ಒದಗಿಸಬೇಕೆಂದು ಆಗ್ರಹಿಸಿದರು. ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್, ಕಾರ್ಯದರ್ಶಿ ನಿತಿನ್‌ರೆಡ್ಡಿ, ನಗರಾಧ್ಯಕ್ಷ ಲೋಕೇಶ್, ಗ್ರಾಮಾಂತರ ಘಟಕದ ಅಧ್ಯಕ್ಷ ಪ್ರಾಂಕ್ಲಿನ್ ಸಾಲೋಮನ್, ಕಾರ್ಯದರ್ಶಿ ರಾಘವೇಂದ್ರ ಇತರರಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts