25.7 C
Bangalore
Sunday, December 15, 2019

ಅಂಧರಿಗೂ ಬದುಕು ಕೊಟ್ಟ ದೇವರು

Latest News

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...
ಬೀದರ್: ಪದ್ಮಭೂಷಣ ಡಾ. ಪಂ.ಪುಟ್ಟರಾಜ ಕವಿ ಗವಾಯಿಗಳು ಅಂಧರಿಗೆ ಸ್ವಾವಲಂಬಿ ಬದುಕು ಕೊಟ್ಟರು. ಅದೆಷ್ಟೋ ಅಂಧರ ಬಾಳು ಬೆಳಗಿದ ದೇವರು ಅವರು ಎಂದು ಹಿರಿಯ ಅಂಧ ಕಲಾವಿದ ಬಸವರಾಜ ಚಿಂಚೋಳೆ ಹೇಳಿದರು.
ನಗರದ ರಂಗಮಂದಿರದಲ್ಲಿ ಗಾನಯೋಗಿ ಪಂಚಾಕ್ಷರ ಗವಾಯಿ ಸೇವಾ ಸಂಘದಿಂದ ಬುಧವಾರ ಜರುಗಿದ ಪುಟ್ಟರಾಜ ಗವಾಯಿಗಳ 9ನೇ ಪುಣ್ಯ ಸ್ಮರಣೋತ್ಸವ, ರಾಜ್ಯಮಟ್ಟದ ಸಾಹಿತ್ಯ, ಸಂಗೀತ, ನೃತ್ಯೋತ್ಸವದಲ್ಲಿ ಪುಟ್ಟರಾಜ ಪ್ರಶಸ್ತಿ ಸ್ವೀಕರಿಸಿ ಮಾತನಾಡಿ, ಪುಟ್ಟರಾಜ ಗುರುಗಳು ಇಲ್ಲದಿದ್ದರೆ ನಮ್ಮಂಥ ಕಲಾವಿದರು ಎಲ್ಲಿರುತ್ತಿದ್ದೇವೋ ಗೊತ್ತಿರಲಿಲ್ಲ. ಭಿಕ್ಷೆ ಬೇಡಿ ಬದುಕುವ ಸ್ಥಿತಿಯಿಂದ  ಪಾರು ಮಾಡಿ ಸ್ವತಂತ್ರ ಬದುಕು ಕರುಣಿಸಿದ ದೇವರು ಎಂದು ಬಣ್ಣಿಸಿದರು.
ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ ಉದ್ಘಾಟಿಸಿ ಮಾತನಾಡಿದರು. ಯಾದಗಿರಿಯ ಸಾಹಿತಿ ಪ್ರಕಾಶ ಅಂಗಡಿ ಉಪನ್ಯಾಸ ನೀಡಿ, ನೂರಾರು ಪುರಾಣ, ಕೀರ್ತನ, ನಾಟಕ, ಕಾವ್ಯ, ಕವನ, ವಚನಗಳನ್ನು ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯಲ್ಲಿ ರಚಿಸಿದ ಖ್ಯಾತಿ ಪುಟ್ಟರಾಜ ಕವಿಗಳಿಗಿದೆ. ಹಿಂದಿಯಲ್ಲಿ ಬರೆದ ಜಗಜ್ಯೋತಿ ಬಸವಣ್ಣನವರ ಮಹಾ ಪುರಾಣ ಓದಿ ಆಗಿನ ರಾಷ್ಟ್ರಪತಿ ರಾಜೇಂದ್ರಪ್ರಸಾದ ಅವರು ಪುಟ್ಟರಾಜರಿಗೆ ರಾಷ್ಟ್ರಪತಿ ಭವನಕ್ಕೆ ಕರೆಸಿ ಗೌರವಿಸಿದ್ದರು ಎಂದು ಹೇಳಿದರು.
ಬಸವಮುಕ್ತಿ ಮಂದಿರದ ಶ್ರೀ ಶಿವಯೋಗೇಶ್ವರ ಸ್ವಾಮಿ ಸಾನ್ನಿಧ್ಯ,  ಪ್ರೊ.ದೇವೇಂದ್ರ ಕಮಲ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ  ಸಿದ್ರಾಮ ಸಿಂಧೆ ಇದ್ದರು. ಸಂಘದ ಅಧ್ಯಕ್ಷ ಪ್ರೊ.ಎಸ್.ವಿ.ಕಲ್ಮಠ ಪ್ರಾಸ್ತಾವಿಕ ಮಾತನಾಡಿದರು. 
ಸಂಗೀತ ನೃತ್ಯ ಸಂಗಮ: ಪಂಡಿತ ರಾಜೇಂದ್ರಸಿಂಗ್ ಪವಾರ ಅವರ ಹಾರ್ಮೋನಿಯಂ ಸೋಲೊ , ಖ್ಯಾತ ಗಾಯಕ ಕೃಷ್ಣಾ ಮುಖೇಡಕರ ಅವರ ಹಿಂದುಸ್ತಾನಿ ಶಾಸ್ತೀಯ ಗಾಯನ, ರಾಣಿ ಸತ್ಯಮೂರ್ತಿ ತಂಡದವರಿಂದ ನೃತ್ಯ ನಡೆಯಿತು. ರಮೇಶ ಕೊಳಾರ  ತಬಲಾ, ವಿಘ್ನೇಶ್ವರ ಹಿರೇಮಠ ಹಾರ್ಮೋನಿಯಂ, ಲಕ್ಷ್ಮಣರಾವ ಆಚಾರ್ಯ ತಂಬೂರಿ ಸಾಥ್ ನೀಡಿದರು. ಗಾನಯೋಗಿ ಪಂಚಾಕ್ಷರ ಗವಾಯಿ ಸಂಗೀತ ವಿದ್ಯಾಲಯ ಮಕ್ಕಳಿಂದ ನಾಡ ಗೀತೆ ಹಾಗೂ ಪುಟ್ಟರಾಜ ಗವಾಯಿಗಳಿಗೆ  ಸಂಗೀತ ನಮನ ಸಲ್ಲಿಸಲಾಯಿತು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...