More

    ಮಾ.3 ರಂದು ಪಂ.ಪುಟ್ಟರಾಜ ಕವಿ ಗವಾಯಿಗಳವರ 109ನೇ ಜಯಂತ್ಯೋತ್ಸವ

    ಗದಗ: ಲಿಂ. ಪಂ. ಪುಟ್ಟರಾಜ ಕವಿ ಗವಾಯಿಗಳವರ 109ನೇ ಜಯಂತ್ಯೋತ್ಸವದ ಅಂಗವಾಗಿ ಮಾ.3 ರಂದು ಸರ್ವಧರ್ಮ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ ಎಂದು ವಿರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ಹೇಳಿದರು.
    ನಗರದ ವಿರೇಶ್ವರ ಪುಣ್ಯಾಶ್ರಮದಲ್ಲಿ ಗುರುವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿ, ಈ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ 20 ನವಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಮತ್ತು ಬೆಳಿಗ್ಗೆ 1009 ಕುಂಭೋತ್ಸವ ಜರುಗಲಿದೆ ಎಂದರು.
    ಕೆ. ಎಚ್​. ಪಾಟೀಲ್​ ಅಭಿಮಾನಿ ಬಳಗದ ಅಧ್ಯಕ್ಷ ಪೀರಸಾಬ್​ ಕೌತಾಳ ಮಾತನಾಡಿ, ಕಳೆದ ಒಂಬತ್ತು ವರ್ಷದಿಂದ ಕೆ. ಎಚ್​. ಪಾಟೀಲ ಅಭಿಮಾನಿ ಬಳಗದಿಂದ ಗವಾಯಿಗಳವರ ಜಯಂತಿಯಲ್ಲಿ ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕುಂಭಗಳ ಮೆರವಣಿಗೆಯನ್ನು ಕಲ್ಲಯ್ಯಜ್ಜನವರು ಚಾಲನೆ ನೀಡಲಿದ್ದಾರೆ. ಕುಂಭಮೇಳವು ವಿರೇಶ್ವರ ಪುಣ್ಯಾಶ್ರಮದಿಂದ ಆರಂಭಗೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಮರಳಿ ಆಶ್ರಮಕ್ಕೆ ತಲುಪಲಿದೆ. ನಂತರ 12.30ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ಜರುಗಲಿದೆ ಎಂದರು.
    ತೋಂಟದ ಸಿದ್ದರಾಮ ಶ್ರೀಗಳು ಸಾನ್ನಿಧ್ಯ ವಹಿಸುವರು. ಶಿರಹಟ್ಟಿ- ಬಾಳೆಹೊಸೂರು ಸಂಸ್ಥಾನ ಮಠದ ಫಕೀರ ದಿಂಗಾಲೇಶ್ವರ ಶ್ರೀಗಳು, ಗದುಗಿನ ಶಿವಾನಂದ ಮಠದ ಅಭಿನವ ಶಿವಾನಂದ ಶ್ರೀಗಳು, ಬಳಗಾನೂರಿನ ಶಿವಶಾಂತವೀರ ಶರಣರು, ಕಪೋತಗಿರಿ ನಂದಿವೇರಿ ಸಂಸ್ಥಾನಮಠದ ಶಿವಕುಮಾರ ಶ್ರೀಗಳು, ಬ್ರಹನ್ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಶ್ರೀಗಳು ಉಪಸ್ಥಿತಿ ಇರುವರು. ಶಾಸಕ ಡಾ. ಎಚ್​.ಕೆ.ಪಾಟೀಲ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕ ಡಿ. ಆರ್​. ಪಾಟೀಲ, ನಗರಸಭೆ ಅಧ್ಯಕ್ಷ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ ಸೇರಿದಂತೆ ಮುಂತಾದವರು ಉಪಸ್ಥಿತರಿರುವರು ಎಂದು ಪೀರಸಾಬ್​ ಕೌತಾಳ ಮಾಹಿತಿ ನೀಡಿದರು.
    ಸುದ್ದಿಗೋಷ್ಠಿಯಲ್ಲಿ ಹೇಮರಾಜ ಶಾಸ್ತ್ರಿಗಳು, ರಮೇಶ ಮುಳಗುಂದ, ವಿನೋದ ಸಿದ್ಲಿಂಗ, ದಾವಲಸಾಬ್​ ಇರಕಲ್​ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts