More

    ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡಿ

    ರಾಯಚೂರು: ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಮುಂಭಾಗದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಜಿಲ್ಲಾ ಉಪ್ಪಾರ ಸಮಾಜ ಸೇವಾಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

    ಸಂಭಾವ್ಯರ ಪಟ್ಟಿಯಲ್ಲಿ ಪುಟ್ಟರಂಗಶೆಟ್ಟಿ ಹೆಸರು ಇತ್ತು. ಆದರೆ, ಕೊನೇ ಘಳಿಗೆಯಲ್ಲಿ ಪುಟ್ಟರಂಗಶೆಟ್ಟಿ ಹೆಸರು ಕೈಬಿಡುವ ಮೂಲಕ ಸಮುದಾಯಕ್ಕೆ ಭಾರಿ ಅನ್ಯಾಯ ಮಾಡಲಾಗಿದೆ. 25 ಕ್ಷೇತ್ರದಲ್ಲಿ ಉಪ್ಪಾರ ಸಮುದಾಯದವರು ನಿರ್ಣಾಯಕ ಮತದಾರರಾಗಿದ್ದಾರೆ. ಕಾಂಗ್ರೆಸ್‌ನ ಹಲವು ಶಾಸಕರ ಗೆಲುವಿನಲ್ಲಿ ನಮ್ಮ ಸಮುದಾಯದ ಬೆಂಬಲವಿದೆ. ಆದರೆ, ಉಪ್ಪಾರ ಸಮುದಾಯದ ಏಕೈಕ ಶಾಸಕ ಹಾಗೂ 4 ಭಾರಿ ವಿಧಾನಸಭೆಗೆ ಆಯ್ಕೆಯಾಗಿರುವ ಪುಟ್ಟರಂಗಶೆಟ್ಟಿ ಗೆ ಸಚಿವ ಸ್ಥಾನ ನೀಡದಿರುವುದು ಖಂಡನೀಯ ಎಂದರು.

    ಉಪ್ಪಾರ ಸಮುದಾಯ ಕನಿಷ್ಠ ಮೂವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು. ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು. ಸಮುದಾಯ ಅಬಿವೃದ್ಧಿಗೆ 200 ಕೋಟಿ ರೂ. ಅನುದಾನ ಒದಗಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಪ್ರತಿ ಜಿಲ್ಲೆಯಲ್ಲಿ ಸಮುದಾಯ ಭವನ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.
    ಜಿಲ್ಲಾ ಗೌರವಾಧ್ಯಕ್ಷ ದೇವಂದ್ರಪ್ಪ ಉಪ್ಪಾರ, ಅಧ್ಯಕ್ಷ ಪಾಗುಂಟಪ್ಪ ಮಿರ್ಜಾಪುರ, ಕಾರ್ಯದರ್ಶಿ ಎಂ.ಚಂದ್ರಶೇಖರ, ಮದ್ದಿಕೇರಿ ಈರಣ್ಣ, ಗಧಾರ ನರಸರೆಡ್ಡಿ, ಭೀಮಯ್ಯ ಬುದ್ದಿನ್ನಿ, ಜಂಬಲದಿನ್ನಿ ನರಸಿಂಹಲು, ಆಶಾಪುರ ಹನುಮಂತಪ್ಪ, ನವಲಕಲ್ ಶ್ರೀನಿವಾಸ, ದೇವನಪಲ್ಲಿ ನಾರಾಯಣ, ಎಂ.ಚಂದ್ರಮೌಳಿ, ರಂಗನಾಥ, ಸಂತೋಷ ಸಾಗರ, ಪಿ.ಸುರೇಖಾ, ಬಿ.ಮಾಲತಿ, ಆದಿಲಕ್ಷ್ಮೀ, ಮಂಜುಳಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts