25.9 C
Bengaluru
Wednesday, January 22, 2020

ಪುತ್ತೂರಿನ ಮಾಯಿದೆ ದೇವುಸ್ ಚರ್ಚ್​​ನ ಸೆಕ್ಯುರಿಟಿ ಲಾರೆನ್ಸ್ ಡಿ’ ಸೋಜ ಬೈಕ್ ಅಪಘಾತದಲ್ಲಿ ಮೃತ್ಯು

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಪುತ್ತೂರು: ಹೃದಯಭಾಗದಲ್ಲಿರುವ ಮಾಯಿದೆ ದೇವುಸ್ ಚರ್ಚ್ ನಲ್ಲಿ ಕಳೆದ ಸುಮಾರು ಹದಿನೈದು ವರ್ಷಗಳಿಂದ ಮಾಯಿದೆ ದೇವುಸ್ ಚರ್ಚ್​​ನಲ್ಲಿ ಸೆಕ್ಯುರಿಟಿ ವೃತ್ತಿ ಮಾಡುತ್ತಿದ್ದ ಲಾರೆನ್ಸ್ ಡಿ’ಸೋಜ(70) ರವರು ಡಿ.6 ರಂದು ರಾತ್ರಿ ಮುಕ್ರಂಪಾಡಿ ಕಮ್ಮಾಡಿ ಫ್ಲ್ಯೆವುಡ್ ಫ್ಯಾಕ್ಟರಿ ಬಳಿ ರಸ್ತೆ ದಾಟಲೆತ್ನಿಸಿದ ವೇಳೆ ಸುಜುಕಿ ಡಿಕ್ಸರ್ ಬೈಕೊಂದು ಢಿಕ್ಕಿಯಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಅಪಘಾತವಾದ ತಕ್ಷಣ ಸ್ಥಳೀಯರೊಬ್ಬರು ಆಂಬುಲೆನ್ಸ್ ಗೆ ಕರೆಮಾಡಿ, ಗಾಯಾಳು ಪಾದಚಾರಿ ವ್ಯಕ್ತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಗಾಯಾಳು ಆ ಸಮಯದಲ್ಲಿ ಮೃತಪಟ್ಟಿದ್ದಾರೆನ್ನಲಾಗಿದೆ. ಮೃತ ಲಾರೆನ್ಸ್ ರವರ ಎಡ ಕಾಲು ತುಂಡಾಗಿದ್ದು, ಎದೆಯ ಭಾಗಕ್ಕೆ ಮತ್ತು ತಲೆಗೆ ಗಂಭೀರ ಗಾಯಗಳಾಗಿತ್ತು ಎನ್ನಲಾಗಿದೆ.

ಮೃತ ಲಾರೆನ್ಸ್ ಅವರು ಮಾಯಿದೆ ದೇವುಸ್ ಚರ್ಚ್ ವಠಾರದಲ್ಲಿ ಕಳೆದ ಮೂರು ದಿನಗಳಿಂದ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ, ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಮಾಯಿದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಸೆಕ್ಯುರಿಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಾರ್ಷಿಕೋತ್ಸವದ ಕೊನೆ ದಿನವಾದ ಡಿಸೆಂಬರ್ 6ರಂದು ಲಾರೆನ್ಸ್ ರವರು ಮಾಯಿದೆ ದೇವುಸ್ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವದಲ್ಲಿ ಸೆಕ್ಯುರಿಟಿ ಸೇವೆಯನ್ನು ನಿರ್ವಹಿಸುತ್ತಿದ್ದರು. ವಾರ್ಷಿಕೋತ್ಸವ ಮುಗಿದ ಬಳಿಕ ರಾತ್ರಿ ಹತ್ತು ಗಂಟೆ ಹೊತ್ತಿಗೆ ಲಾರೆನ್ಸ್ ರವರು ಮುಕ್ರಂಪಾಡಿ ಆನಂದಾಶ್ರಮ ತಮ್ಮ ಮನೆ ಕಡೆಗೆ ರಿಕ್ಷಾದಲ್ಲಿ ಹೋಗುತ್ತಿದ್ದ ಸಂದರ್ಭ ಮುಕ್ರಂಪಾಡಿ ಕಮ್ಮಾಡಿ ಬಳಿ ರಿಕ್ಷಾದಿಂದ ಇಳಿದು ರಸ್ತೆ ದಾಟಲೆತ್ನಿಸುವಾಗ ಪುತ್ತೂರಿನಿಂದ ಶೇಖಮಲೆಗೆ ವಿವೇಕಾನಂದ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿ ಮಿಥುನ್ ಅವರು ಚಲಾಯಿಸುತ್ತಿದ್ದ ಸುಜುಕಿ ಡಿಕ್ಸರ್ ಬಲವಾಗಿ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.

ಢಿಕ್ಕಿ ಹೊಡೆದ ಸುಜುಕಿ ಡಿಕ್ಸರ್ ಸವಾರ ಮಿಥುನ್ ರವರು ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಮೃತ ಲಾರೆನ್ಸ್ ಅ ವರು ಕಳೆದ ಸುಮಾರು ಹತ್ತು ವರ್ಷಗಳಿಂದ ಮಾಯಿದೆ ದೇವುಸ್ ಚರ್ಚ್ ನಲ್ಲಿ ಹಾಗೂ ಸಂತ ಫಿಲೋಮಿನಾ ಕಾಲೇಜಿನಲ್ಲಿ, ಫಾದರ್ ಪತ್ರಾವೋ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಪುತ್ತೂರು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮೃತ ಶರೀರವನ್ನು ಇರಿಸಲಾಗಿದೆ. ಮೃತರು ಪತ್ನಿ ಬೆನ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...