ಸ್ವಾವಲಂಬನೆಯಿಂದ ಅಭಿವೃದ್ಧಿ, ಆರೆಸ್ಸೆಸ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕೆ ಹೇಳಿಕೆ

blank

ಪುತ್ತೂರು: ಸ್ವಾವಲಂಬನೆಯಿಂದ ದೇಶದ ಅಗಾಧ ಮೂಲವಸ್ತುಗಳನ್ನು ಬಳಸಿ ನಮಗೆ ಬೇಕಾದಂ ವಸ್ತುಗಳನ್ನು ಇಲ್ಲೇ ತಯಾರಿಸಿ ಬಳಸುವುದರಿಂದ ಇತರ ದೇಶಗಳನ್ನು ಅವಲಂಬಿಸುವ ಪ್ರಮೇಯ ತಪ್ಪುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕೆ ಹೇಳಿದರು.
ಸ್ವದೇಶಿ ಜಾಗರಣಾ ಮಂಚ್ ಮತ್ತು ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ವಾಣಿಜ್ಯೋದ್ಯಮ ಅಭಿವೃದ್ಧಿ ಕೋಶ ಸಂಯುಕ್ತ ಆಶ್ರಯದಲ್ಲಿ ಬುಧವಾರ ಸ್ವಾವಲಂಬಿ ಭಾರತ ಒಂದು ಪರಿಕಲ್ಪನೆ ಎಂಬ ವಿಷಯದ ವಿಚಾರ ಸಂಕಿರಣದಲ್ಲಿ ವಿಷಯ ಮಂಡಿಸಿದರು. ಸ್ಥಳೀಯವಾಗಿ ದೊರಕುವ ದೇಶೀಯ ಸಂಪತ್ತು ವಿನಿಯೋಗಿಸಿಕೊಂಡು ಅದನ್ನು ಉತ್ಪನ್ನವಾಗಿ ಅಭಿವೃದ್ಧಿಪಡಿಸುವುದರ ಜತೆಗೆ ಅದಕ್ಕೆ ವ್ಯಾಪಕ ಮಾರುಕಟ್ಟೆ ಒದಗಿಸಿಕೊಡುವಲ್ಲಿ ತಂತ್ರಜ್ಞರೆಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಅಚ್ಯುತ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ ಕೆ ಉಪಸ್ಥಿತರಿದ್ದರು. ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮ ಸಂಯೋಜಕ ಕಾಲೇಜಿನ ವಾಣಿಜ್ಯೋದ್ಯಮ ಅಭಿವೃದ್ಧಿ ಕೋಶ ಮುಖ್ಯಸ್ಥ ಡಾ.ಮನುಜೇಶ್.ಬಿ.ಜೆ ಸ್ವಾಗತಿಸಿ ವಂದಿಸಿದರು.

ಭಾರತ ಹತ್ತು ಹಲವು ವಿಚಾರಗಳಲ್ಲಿ ಪ್ರಪಂಚದಲ್ಲಿ ಮೊದಲ ಸ್ಥಾನದಲ್ಲಿದೆ. ಈ ನಿಟ್ಟಿನಲ್ಲಿ ಭಾರತೀಯತೆಯೊಂದಿಗೆ ಹೊಸತನ ತರುವುದಕ್ಕಾಗಿ ಯುವಜನಾಂಗ ಸನ್ನದ್ಧರಾಗಬೇಕು. ಅದಕ್ಕೆ ಬೇಕಾದ ತಾಂತ್ರಿಕ ನೈಪುಣ್ಯ ಬೆಳೆಸಿಕೊಳ್ಳಬೇಕು. ಇದರಿಂದ ಭಾರತವು ಸ್ವಾವಲಂಬನೆ ಸಾಧಿಸುವುದರ ಜತೆಗೆ ವಿಶ್ವಗುರುವಾಗುವುದರಲ್ಲಿ ಸಂದೇಹವಿಲ್ಲ.
ಜಗದೀಶ ಕೆ
ಆರೆಸ್ಸೆಸ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ

Share This Article

ಈ ಅಭ್ಯಾಸಗಳಿಂದ ನೀವು ಶ್ವಾಸಕೋಶ ಕ್ಯಾನ್ಸರ್​ಗೆ​ ತುತ್ತಾಗಬಹುದು ಎಚ್ಚರ! ತಡೆಗಟ್ಟದ್ದಿದ್ರೆ ಸಾವು ಕಟ್ಟಿಟ್ಟಬುತ್ತಿ | Lung Cancer

Lung Cancer: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದವರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ. ವಯಸ್ಸಿನ…

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…