

ಕಾಸರಗೋಡು: ಹಿರಿಯ ಯಕ್ಷಗಾನ ಅರ್ಥದಾರಿ, ಗಮಕ ವ್ಯಾಖ್ಯಾನಕಾರ, ಸಾಹಿತ್ಯ ವಿಮರ್ಶಕ ಬೆಳ್ಳಿಗೆ ನಾರಾಯಣ ಮಣಿಯಾಣಿ ಅವರಿಗೆ ತುಳುರತ್ನ, ಬಹುಭಾಷಾ ವಿದ್ವಾಂಸ ಪುಂಡೂರು ವೆಂಕಟ್ರಾಜ ಪುಣಿಂಚಿತ್ತಾಯ ಅವರ ಹೆಸರಲ್ಲಿ ಕೊಡಮಾಡುವ ‘ಪುವೆಂಪು-2024’ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ನ.20ರಂದು ಬದಿಯಡ್ಕದ ವಳಮಲೆ ಇರಾ ಸಭಾಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಾ.ಪಿ.ವೆಂಕಟರಾಜ ಪುಣಿಂಚಿತ್ತಾಯ ಅವರ 88ನೇ ಹುಟ್ಟುಹಬ್ಬ ಪುವೆಂಪು ನೆನಪು 2024 ಕಾರ್ಯಕ್ರಮದಲ್ಲಿ ಸಾಹಿತಿ ಪ್ರೊ.ವಿ.ಬಿ.ಅರ್ತಿಕಜೆ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ತಂತ್ರಿ ಉಳಿಯತ್ತಾಯ ವಿಷ್ಣು ಆಸ್ರ ಹಾಗೂ ಶಾಸಕ ಎನ್.ಎ.ನೆಲ್ಲಿಕುನ್ನು ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.