20.8 C
Bangalore
Sunday, December 8, 2019

ಜಿಪಂ ಪಿವಿಸಿ ಪೈಪ್ ಕಳವು!

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಹಾವೇರಿ: ನಗರದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆವರಣದಲ್ಲಿದ್ದ 7 ಇಂಚು ಅಗಲ, 20 ಅಡಿ ಉದ್ದದ ಪಿವಿಸಿ ಪೈಪ್​ಗಳು ಗುರುವಾರ ತಡರಾತ್ರಿ ಕಳ್ಳತನವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಪಂ ಮಾಜಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಅಧಿಕಾರಿಗಳು ಕಳ್ಳರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಇದರಲ್ಲಿ ಶಾಮೀಲಾಗಿರುವ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಷ್ಟು ಪೈಪ್ ಇದ್ದವು ಎಂಬ ಲೆಕ್ಕವೂ ಇಲ್ಲ…: ಜಿಪಂನ ಎರಡು ಜಿಲ್ಲಾಮಟ್ಟದ ಇಲಾಖೆ ಕಚೇರಿಗಳಿರುವ ಆವರಣದಲ್ಲಿ 2009ರಿಂದ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಲನಿರ್ಮಲ ಯೋಜನೆಯ ಕಾಮಗಾರಿಗಾಗಿ ಈ ಪೈಪ್​ಗಳನ್ನು ಖರೀದಿಸಲಾಗಿತ್ತು. 2012ರಲ್ಲಿ ಜಲ ನಿರ್ಮಲ ಯೋಜನೆಯನ್ನು ಸ್ಥಗಿತಗೊಳಿಸಿ ಅದರ ಕಾಮಗಾರಿಗಳನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಸರ್ಕಾರ ವಿಲೀನ ಮಾಡಿತ್ತು. ಜಲ ನಿರ್ಮಲ ಯೋಜನೆಗಾಗಿ ಖರೀದಿಯಾಗಿದ್ದರೂ ಬಳಕೆಯಾಗದೇ ಈ ಪೈಪ್​ಗಳು ಉಳಿದಿದ್ದವು. ನಾನು ಜಿಪಂ ಅಧ್ಯಕ್ಷನಿದ್ದ ಸಮಯದಲ್ಲಿ ಬೇರೆ ಕಾಮಗಾರಿಗಳಿಗೆ ಇವುಗಳನ್ನು ನೀಡುವಂತೆ ವಿನಂತಿಸಿದ್ದೆ. ಆದರೆ, ಅಧಿಕಾರಿಗಳು ಅವುಗಳನ್ನು ಬೇರೆ ಕಾಮಗಾರಿಗಳಿಗೆ ಬಳಕೆ ಮಾಡಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಎಷ್ಟು ಪೈಪ್​ಗಳಿದ್ದವು, ಅವುಗಳ ಅಂದಾಜು ಮೊತ್ತವೆಷ್ಟು ಎಂಬ ಮಾಹಿತಿಯೂ ಅಧಿಕಾರಿಗಳು ನೀಡಿರಲಿಲ್ಲ. ಆದರೆ ಇದೀಗ ರಾತ್ರೋರಾತ್ರಿ ಕೋಟ್ಯಂತರ ರೂ. ಮೌಲ್ಯದ ಪೈಪ್​ಗಳು ಕಳವಾಗಿವೆ. ಪೈಪ್​ಗಳು ಕಳ್ಳತನವಾಗುವುದಕ್ಕೂ ಮುನ್ನ ಜೂ. 3ರಂದು ಪೈಪ್​ಗಳನ್ನು ಯಾರಿಗೂ ಕೊಡದಂತೆ ತಕರಾರು ಅರ್ಜಿ ಸಲ್ಲಿಸಿದ್ದೆ. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಇದರ ಪರಿಣಾಮದಿಂದ ಪೈಪ್​ಗಳು ಕಳ್ಳತನವಾಗಿವೆ. ಇದರ ಸಮಗ್ರ ತನಿಖೆ ನಡೆಸಿ, ಪೈಪ್​ಗಳು ಕಳ್ಳತನವಾಗಲು ಕಾರಣರಾದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಇಲಾಖಾ ವಿಚಾರಣೆ ನಡೆಸಬೇಕು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿ 2 ಇಲಾಖೆಯ ಆಯುಕ್ತರಿಗೆ ದೂರು ಸಲ್ಲಿಸಿದ್ದೇನೆ ಎಂದರು.

ಪೈಪ್​ಗಳನ್ನು ಒಯ್ದಿದ್ದಾರಾ, ಕಳ್ಳತನವಾಗಿವೆಯಾ…?

ಜಿಪಂನ ಅಧೀನದಲ್ಲಿದ್ದ ಪೈಪ್​ಗಳು ಕಳ್ಳತನವಾಗಿವೆಯೋ ಅಥವಾ ಯಾರಾದರೂ ಒಯ್ದಿದ್ದಾರಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಜಿಪಂ ಅಧ್ಯಕ್ಷರು ಹೇಳುವ ಪ್ರಕಾರ ಪೈಪ್​ಗಳು ಕಳ್ಳತನವಾಗುವ ಮೂರು ದಿನಗಳ ಮೊದಲು ಈ ಪೈಪ್​ಗಳನ್ನು ಬೇರೆ ಕಾಮಗಾರಿಗೆ ಕೊಡದಂತೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅಂದರೆ ಅಧಿಕಾರಿಗಳು ಯಾರದೂ ಪ್ರಭಾವಿ ಜನಪ್ರತಿನಿಧಿಯೊಬ್ಬರ ಸೂಚನೆ ಮೇರೆಗೆ ಈ ಪೈಪ್​ಗಳನ್ನು ಅನ್ಯ ಕಾಮಗಾರಿಗೆ ಬಳಕೆ ಮಾಡಿಕೊಳ್ಳಲು ಸಿದ್ಧತೆ ನಡೆಸಿದ್ದರು. ಇದು ಗಮನಕ್ಕೆ ಬಂದ ನಂತರವೇ ಕೊಟ್ರೇಶಪ್ಪ ಬಸೇಗಣ್ಣಿ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಇದೆಲ್ಲವನ್ನು ಗಮನಿಸಿದರೆ ಈ ಪೈಪ್​ಗಳು ಕಳ್ಳತನವಾಗಿಲ್ಲ. ಕನವಳ್ಳಿ ಗ್ರಾಮದಲ್ಲಿ ಉಲ್ಬಣಗೊಂಡಿದ್ದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯ ಕಾಮಗಾರಿಗೆ ಶಾಸಕರ ಸೂಚನೆಯಂತೆ ಹೋಗಿವೆ. ಹಿಂದಿನ ಶಾಸಕರ ಅವಧಿಯಲ್ಲಿ ಪೈಪ್​ಗಳನ್ನು ಕೇಳಿದರೂ ಕೊಡದ ಅಧಿಕಾರಿಗಳು ಈಗಿನ ಶಾಸಕರ ಸೂಚನೆಗೆ ತಲೆಬಾಗಿರುವುದು ಕೊಟ್ರೇಶಪ್ಪ ಬಸೇಗಣ್ಣಿ ಅವರ ಕೋಪಕ್ಕೆ ಕಾರಣವಾಗಿದೆ ಎಂಬ ಮಾತುಗಳು ಕೇಳಿಬರತೊಡಗಿವೆ.

ನಾನು ಇತ್ತೀಚೆಗೆ ಇಇ ಆಗಿ ಅಧಿಕಾರ ಸ್ವೀಕರಿಸಿದ್ದೇನೆ. ಜಲ ನಿರ್ಮಲ ಯೋಜನೆಯ ಎಷ್ಟು ಪೈಪ್​ಗಳನ್ನು ಇಲ್ಲಿ ಸಂಗ್ರಹಿಸಲಾಗಿತ್ತು ಎಂಬ ಮಾಹಿತಿಯಿರಲಿಲ್ಲ. ನಿನ್ನೆ ರಾತ್ರಿ ಹತ್ತಾರು ಜನರು ಗುಂಪಿನಲ್ಲಿ ಬಂದು ನಮ್ಮ ವಾಚ್​ವೆುನ್​ನನ್ನು ಬೆದರಿಸಿ, ಗಲಾಟೆ ಮಾಡಿ ಪೈಪ್​ಗಳನ್ನು ಒಯ್ದಿರುವ ಮಾಹಿತಿ ಬಂದಿದೆ. ಎಷ್ಟು ಪೈಪ್ ಇದ್ದವು, ಎಷ್ಟು ಕಳವಾಗಿವೆ ಎಂಬುದರ ಪರಿಶೀಲನೆ ನಡೆಸಿದ್ದು, ನಂತರ ದೂರು ದಾಖಲಿಸುತ್ತೇವೆ.
| ಸಯ್ಯದ ಮುಸ್ತಾಕಅಹ್ಮದ್, ಇಇ, ಜಿಪಂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...