ನವದೆಹಲಿ: ಇಂದು (ಜ.06) ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿಯೇ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ (DCM) ಪ್ರಕಟಿಸಿದರು.
ಇದನ್ನೂ ಓದಿ: ಇದು ಆಟೋ.. ರೊಮ್ಯಾನ್ಸ್ ಮಾಡೋಕೆ ಓಯೋ ರೂಮ್ ಅಲ್ಲ.. ಪ್ರಯಾಣಿಕರಿಗೆ ಎಚ್ಚರಿಕೆ ಕೊಟ್ಟ ಆಟೋ ಚಾಲಕನ ಬರಹ ವೈರಲ್ | OYO
“ಪ್ಯಾರಿ ದೀದಿ ಯೋಜನೆ ಬಗ್ಗೆ ಮಾತನಾಡಿದ ಡಿ.ಕೆ. ಶಿವಕುಮಾರ್, “ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ಪ್ಯಾರಿ ದೀದಿ ಯೋಜನೆ ಜಾರಿ ಮಾಡಿ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2,500 ರೂ. ನೀಡಲಾಗುವುದು. ಉಳಿದ ಗ್ಯಾರಂಟಿ ಯೋಜನೆಯನ್ನು ಮುಂದಿನ ದಿನಗಳಲ್ಲಿ ನಮ್ಮ ನಾಯಕರು ತಿಳಿಸಲಿದ್ದಾರೆ” ಎಂದು ಹೇಳಿದರು.
“ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನಾನಿಂದು ಇಲ್ಲಿ ಪ್ರಮುಖ ಯೋಜನೆಯ ಭರವಸೆ ನೀಡುತ್ತಿದ್ದೇನೆ. ನೂರು ವರ್ಷಗಳ ಹಿಂದೆ ಅಂದರೆ 1924ರ ಡಿ.26ರಂದು ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ಅದರ ಶತಮಾನೋತ್ಸವವನ್ನು ನಾವು ಇತ್ತೀಚೆಗಷ್ಟೇ ಆಚರಿಸಿದ್ದೇವೆ. ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಾಗದಲ್ಲಿ ಇರುವ ಬಾವಿಯಲ್ಲಿನ ನೀರು ತೆಗೆದುಕೊಂಡು ಸಿದ್ದರಾಮಯ್ಯ ಅವರು ಸೇರಿದಂತೆ ನಮ್ಮ ಪಕ್ಷದ ನಾಯಕರು ಅಲ್ಲಿನ ಜಾಗವನ್ನು ಸ್ವಚ್ಛ ಮಾಡಿ ಕರ್ನಾಟಕ ರಾಜ್ಯವನ್ನು ಭ್ರಷ್ಟ ಸರ್ಕಾರದಿಂದ ಮುಕ್ತಗೊಳಿಸುವ ಪಣತೊಟ್ಟೆವು” ಎಂದರು.
ಇದನ್ನೂ ಓದಿ: MP Yaduveer Meets Siddaramaiah | ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯನನ್ನು ಭೇಟಿಯಾಗಿ ಸಂಸದ ಯದುವೀರ್
“ಇದೇ ಸಂದರ್ಭದಲ್ಲಿ ನಮ್ಮ ಪಕ್ಷದ ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿಯನ್ನು ಘೋಷಣೆ ಮಾಡಲಾಯಿತು. ನಂತರ ಗೃಹಲಕ್ಷ್ಮಿ ಯೋಜನೆಯನ್ನು ಪ್ರಿಯಾಂಕಾ ಗಾಂಧಿ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಅವರು ಇದು ಕೇವಲ ಭರವಸೆಯಾಗಬಾರದು. ಈ ಯೋಜನೆ ಜಾರಿ ಬಗ್ಗೆ ಜನರಲ್ಲಿ ನಂಬಿಕೆ ಹುಟ್ಟಬೇಕು. ಹೀಗಾಗಿ ನಾನು ಹಾಗೂ ಸಿದ್ದರಾಮಯ್ಯ ಅವರು ಗ್ಯಾರಂಟಿ ಚೆಕ್ಗೆ ಸಹಿ ಹಾಕಿದೆವು. ನಂತರ ಸರ್ಕಾರ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಅನುಮೋದನೆ ನೀಡಲಾಯಿತು” ಎಂದು ಹೇಳಿದರು.
“ಮೊದಲ ಮೂರು ತಿಂಗಳಲ್ಲಿ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಉಚಿತ ಸರ್ಕಾರಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಬಡವರಿಗೆ 10 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ, ಪ್ರತಿ ಮನೆಗೆ 200 ಯೂನಿಡ್ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡಲಾಗುತ್ತಿದೆ” ಎಂದರು.
ಇದಕ್ಕೆ ಉತ್ತರ ಹುಡುಕಿದ್ರೆ ನೀವೇ ಬುದ್ಧಿಶಾಲಿಗಳು! ಕೊಟ್ಟು ನೋಡಿ ನಿಮ್ಮ ಮಿದುಳಿಗೆ ಕೆಲಸ | Brain Teaser