More

    ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಸಲು ಕ್ಯೂ

    ಬೀರೂರು: ಸರ್ಕಾರ ಜಾರಿಗೊಳಿಸಿರುವ 5 ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಬುಧವಾರ ಆರಂಭವಾಗುತ್ತದೆ ಎಂದು ಅರ್ಜಿ ಸಲ್ಲಿಸಲು ಮಹಿಳೆಯರು ಗ್ರಾಮ ಒನ್, ಕರ್ನಾಟಕ ಒನ್, ಕಂಪ್ಯೂಟರ್ ಕೇಂದ್ರಗಳಿಗೆ ಮುಗಿಬಿದ್ದಿದ್ದರು. ಬೆಳಗ್ಗೆಯಿಂದಲೇ ಕಾದರೂ ಯಾವುದೇ ವೆಬ್‌ಸೈಟ್ ಕಾರ್ಯನಿರ್ವಹಿಸದ ಕಾರಣ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ.

    ಪಡಿತರ ಚೀಟಿ ಹೊಂದಿರುವವರು 5 ಕೆ.ಜಿ ಅಕ್ಕಿ ಬದಲಿಗೆ ತಲಾ 170 ರೂ. ಪಾವತಿಸುವ ಯೋಜನೆಗೆ ಪಡಿತರ ಚೀಟಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ, ಇಲ್ಲವೋ, ಬ್ಯಾಂಕ್ ಪಾಸ್‌ಬುಕ್‌ಗೆ ಆಧಾರ್ ಲಿಂಕ್ ಆಗಿದೆಯೋ ಇಲ್ಲವೋ ಎಂಬ ಮಾಹಿತಿ ಪಡೆಯಲು ಸಾಲುಗಟ್ಟಿ ನಿಂತರು. ಕೆಲವೊಬ್ಬರು ಪಾಸ್‌ಬುಕ್‌ಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಎಂಬ ಮಾಹಿತಿ ಕೇಳಿ ತಬ್ಬಿಬ್ಬಾದರು. ಇನ್ನು ಕೆಲವರಿಗೆ ಅವರಿಗೆ ತಿಳಿಯದ ಬ್ಯಾಂಕ್‌ಗೆ ಲಿಂಕ್ ಆಗಿರುವುದು ಕಂಡು ದಂಗಾದರು. ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್‌ಬುಕ್ ಲಿಂಕ್ ಕಡ್ಡಾಯವಾಗಿದ್ದು, ಆಗದಿದ್ದರೆ ಪಡಿತರ ಚೀಟಿಯ ಅಕ್ಕಿಯ ಬದಲಿನ ಹಣ ಸಂದಾಯವಾಗುವುದಿಲ್ಲ. ಹಾಗಾಗಿ ಕಂಪ್ಯೂಟರ್ ಕೇಂದ್ರಗಳಲ್ಲಿ ಪರಿಶೀಲಿಸಿದ ನಂತರ ಬ್ಯಾಂಕ್‌ಗಳಿಗೆ ದೌಡಾಯಿಸಿದರು.
    ಪಟ್ಟಣದ ರೈಲ್ವೆ ಸ್ಟೇಷನ್ ರಸ್ತೆ, ಬಿ.ಎಚ್.ರಸ್ತೆ, ಮಾರ್ಕೇಟ್ ರಸ್ತೆ, ಹಲವು ಕಂಪ್ಯೂಟರ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಮಹಿಳೆಯರು ಮತ್ತು ಪುರುಷರು ಕಾಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts