More

    ಗುಣಾತ್ಮಕ ಶಿಕ್ಷಣದಿಂದ ಉಜ್ವಲ ಭವಿಷ್ಯ

    ಬೆಳಗಾವಿ: ನಗರದ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಡಾ.ಎಸ್.ಜಿ.ಬಾಳೇಕುಂದ್ರಿ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ವಿಭಾಗವು ಶನಿವಾರ, ಮೊದಲ ಬ್ಯಾಚ್(2008-2012) ವಿದ್ಯಾರ್ಥಿಗಳ ಸಮಾವೇಶ ಹಮ್ಮಿಕೊಂಡಿತ್ತು. ಸಾನ್ನಿಧ್ಯ ವಹಿಸಿದ್ದ ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಮಾತನಾಡಿ, ಗುಣಾತ್ಮಕ ಶಿಕ್ಷಣ ಪಡೆದರೆ ಪ್ರತಿಯೊಬ್ಬರ ಬದುಕು ಉಜ್ವಲವಾಗುತ್ತದೆ.

    ಕಲಿಕೆ ನಮ್ಮನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ಅಭಿಪ್ರಾ ಯಪಟ್ಟರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಸಿದ್ರಾಮಪ್ಪ ಇಟ್ಟಿ ಮಾತನಾಡಿ, ಇದು ತಾಂತ್ರಿಕ ಯುಗ. ಇಂದು ಎಲ್ಲೆಡೆ ಪೈಪೋಟಿ ಹೆಚ್ಚಿದೆ. ಪ್ರಸ್ತುತ ಅಗತ್ಯತೆಗೆ ತಕ್ಕಂತೆ ವರ್ಷಕ್ಕೊಮ್ಮೆ ಪಠ್ಯಕ್ರಮ ಪರಿಷ್ಕರಿಸಲಾಗುತ್ತಿದೆ.

    ವಿದ್ಯಾರ್ಥಿಗಳು ಶ್ರಮವಹಿಸಿ ಓದಿ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವಿಭಾಗದ ಮುಖ್ಯಸ್ಥೆ ಡಾ.ಜಯಶ್ರೀ ರೂಡಗಿ ಪ್ರಾಸ್ತಾ ವಿಕವಾಗಿ ಮಾತನಾಡಿದರು. ಪ್ರೊ. ಪಿ.ವೀಣಾ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts