ಕಾನಹೊಸಹಳ್ಳಿ: ಕೂಡ್ಲಿಗಿ ತಾಲೂಕಿನಲ್ಲಿ ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣದ ಜತೆ ಅಗತ್ಯ ಶಿಕ್ಷಕರ ನಿಯೋಜನೆ ಮತ್ತು ಮೂಲಸೌಕರ್ಯ ಕಲ್ಪಿಸುವ ಅಗತ್ಯವಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಇದನ್ನೂ ಓದಿ:ಹಿಪ್ಪಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ
ಹುಲಿಕೆರೆ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಶುಕ್ರವಾರ ಮಾತನಾಡಿದರು. ಕ್ಷೇತ್ರದ ಪ್ರತಿಯೊಂದು ಹಳ್ಳಿಗೆ ಭೇಟಿ ನೀಡಿ ಶಾಲೆಗಳಲ್ಲಿರುವ ಸಮಸ್ಯೆಗಳ ಮಹಿತಿ ಪಡೆದು ಅಗತ್ಯ ಸೌಕರ್ಯ ಕಲ್ಪಿಸಲಾಗಿದೆ ಎಂದರು.
ಬಹುತೇಕ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವುದರಿಂದ ಅತಿಥಿ ಶಿಕ್ಷಕರನ್ನು ನೇಮಕ ಮಾಡಿ ಶಿಕ್ಷಕರ ಸಮಸ್ಯೆ ನೀಗಿಸಲಾಗುವುದು. ಕ್ಷೇತ್ರದಲ್ಲಿ ಹಲವಾರು ಶಾಲಾ ಕೊಠಡಿ ಕಾಮಗಾರಿಗೆ ಅನುದಾನ ನೀಡಲಾಗಿದೆ. ಕೆಲವು ಪೂರ್ಣವಾಗಿದ್ದು, ಇನ್ನು ಕೆಲವು ನಿರ್ಮಾಣ ಹಂತದಲ್ಲಿವೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ತಿಳಿಸಿದರು.
ಟಿ.ಸೂರವ್ವನಹಳ್ಳಿಯಲ್ಲಿ 80 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಮತ್ತು ಹಿರೇಕುಂಬಳಗುಂಟೆ, ಚಿಕ್ಕಕುಂಬಗುಂಟೆ ಅಂಗನವಾಡಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಮುಖ್ಯಶಿಕ್ಷಕಿ ವಾಣಿ, ಎಸ್ಡಿಎಂಸಿ ಅಧ್ಯಕ್ಷ ಓಬಳೇಶ್, ತಾಪಂ ಮಾಜಿ ಸದಸ್ಯ ಶರಣನಗೌಡ, ಗ್ರಾಪಂ ಮಾಜಿ ಉಪಾಧ್ಯಕ್ಷ ಎಚ್.ದುರುಗೇಶ್, ನಿವೃತ್ತ ಶಿಕ್ಷಕ ಜಗದೀಶ್, ಪ್ರಮುಖರಾದ ಷಫೀವುಲ್ಲ, ಎಂ.ಜಿ.ರಮೇಶಗೌಡ, ಡಾ.ಟಿ.ಓಂಕಾರಪ್ಪ, ಮಾರಪ್ಪ ಇತರರಿದ್ದರು.