ಗುಣಮಟ್ಟದ ಆಹಾರ ನೀಡಲು ಆಗ್ರಹಿಸಿ ಪ್ರತಿಭಟನೆ

blank

ಹಾವೇರಿ: ತಾಲೂಕಿನ ದೇವಗಿರಿಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್​ ಬಾಲಕರ ವಸತಿ ನಿಲಯದಲ್ಲಿ ಊಟದ ಮೆನ್ಯೂ ಚಾರ್ಟ್​ ಬದಲಾವಣೆ ಮಾಡಿರುವುದನ್ನು ಖಂಡಿಸಿ ಹಾಗೂ ಉತ್ತಮ ಗುಣಮಟ್ಟದ ಆಹಾರ ಸೇರಿ ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ಭಾರತ ವಿದ್ಯಾಥಿರ್ ಫೆಡರೇಷನ್​ (ಎಸ್​ಎಫ್​ಐ) ವತಿಯಿಂದ ಭಾನುವಾರ ವಿದ್ಯಾಥಿರ್ಗಳು ವಸತಿ ನಿಲಯದ ಮುಂದೆ ಉಪವಾಸ ಧರಣಿ ನಡೆಸಿದರು.
ಸಂಟನೆಯ ಅಧ್ಯಕ್ಷ ರೇವಣಸಿದ್ಧಾರಾದ್ಯ ಎನ್​.ಎಸ್​. ಮಾತನಾಡಿ, ವಸತಿ ನಿಲಯದಲ್ಲಿ ಸರಿಯಾಗಿ ಉತ್ತಮ ಗುಣಮಟ್ಟದ ಆಹಾರ ನೀಡುತ್ತಿಲ್ಲ, ಕೊಳೆತ ತರಕಾರಿಗಳನ್ನು ನೀಡುತ್ತಾರೆ. ಅನುದಾನ ನೆಪದಿಂದ ಊಟಕ್ಕೆ ಕಡಿತ ಮಾಡಿದ್ದಾರೆ. ಪುಸ್ತಕಗಳು, ಆಟದ ಸಾಮಗ್ರಿಗಳನ್ನು ಮೂರು ವರ್ಷ ಕಳೆದರು ನೀಡಿಲ್ಲ. ಮೆನ್ಯೂ ಚಾರ್ಟ್​ ಪ್ರಕಾರ ಊಟ ನೀಡುತ್ತಿಲ್ಲ. ಗ್ರಂಥಾಲಯವನ್ನು ಬಳಕೆಗೆ ನೀಡುತ್ತಿಲ್ಲ. ಇಲಾಖೆಯ ಜಿಲ್ಲಾಧಿಕಾರಿ ಹಾಗೂ ತಾಲೂಕು ಅಧಿಕಾರಿಗಳು ವಸತಿ ನಿಲಯಕ್ಕೆ ಬರುವುದಿಲ್ಲ ನಮ್ಮ ಸಮಸ್ಯೆಗಳನ್ನು ಆಲಿಸುವುದಿಲ್ಲ ಎಂದು ದೂರಿದರು.
ಎಸ್​ಎಫ್​ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್​. ಮಾತನಾಡಿ, ವಿದ್ಯಾಥಿರ್ಗಳಿಗೆ ಗುಣಮಟ್ಟದ ಆಹಾರ ನೀಡಬೇಕು. ಶೌಚಗೃಹ ಸರಿಪಡಿಸಿ ಸುಚಿತ್ವ ಕಾಪಾಡಬೇಕು. ಗ್ರಂಥಾಲಯ ನಿರ್ವಹಣೆ ಮಾಡಬೇಕು. ಪುಸ್ತಕಗಳನ್ನು ವಿತರಣೆ ಮಾಡಬೇಕು. ಪ್ರಥಮ ಚಿಕಿತ್ಸೆ ಸಾಮಗ್ರಿಗಳನ್ನು ಕೊಡುವುದು ಸೇರಿ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.
ಪ್ರಮುಖರಾದ ಮಾರುತಿ ರೆಡ್ಡಿ, ಮನೋಜ ಪಂಚಗಟ್ಟಿಮಠ, ಯಶವಂತ ಪಿ.ಕೆ., ದರ್ಶನ ಯು.ಎಂ., ರಮೇಶ ಎಲ್​., ರೇವಣಸಿದ್ದ ಕೆ.ಆರ್​., ಚೇತನ ಕೆ., ಶಿವಕುಮಾರ, ಸಾಗರ ಎಸ್​., ದರ್ಶನ ಪಿ.ಎಚ್​., ಅಭಿಷೇಕ ಎನ್​., ಶ್ರೀಧರ ಯು ಮತ್ತಿತರರು ಪಾಲ್ಗೊಂಡಿದ್ದರು.

Share This Article

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips

Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…

ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd

bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…

ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips

Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…