ಎನ್ನೆಸ್ಸೆಸ್ ಮೂಲಕ ಸೇವಾ ಗುಣ

Kdb_Nss-Unit
Published on

ಕಡಬ: ರಾಷ್ಟ್ರೀಯ ಸೇವಾ ಯೋಜನೆ ಮೂಲಕ ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿ ಜೀವನ ಮೌಲ್ಯ ರೂಢಿಸಿಕೊಳ್ಳಬೇಕೆಂದು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಸುಬ್ರಹ್ಮಣ್ಯ ರಾವ್ ಹೇಳಿದರು.

ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ, ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ಎನ್ನೆಸ್ಸೆಸ್ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಶ್ರೀ ಭಾರತಿ ವಿದ್ಯಾಸಂಸ್ಥೆ ಆಡಳಿತ ಸಮಿತಿ ಅಧ್ಯಕ್ಷ ಡಾ.ಸುರೇಶ್ ಕುಮಾರ್ ಕೂಡೂರು ಅಧ್ಯಕ್ಷತೆ ವಹಿಸಿದ್ದರು.

ಆಲಂಕಾರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಧರ್ಮಪಾಲ್ ರಾವ್, ಶಾಲಾ ಆಡಳಿತ ಮಂಡಳಿ ಗೌರವಾಧ್ಯಕ್ಷ ಕೃಷ್ಣಕುಮಾರ್ ಅತ್ರಿಜಾಲು, ಶರವೂರು ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹೇಮಂತ್ ರೈ ಮನವಳಿಕೆ, ಎನ್ನೆಸ್ಸೆಸ್ ಅನುಷ್ಠಾನ ಸಮಿತಿ ಅಧ್ಯಕ್ಷ ಇಂದುಶೇಖರ ಶೆಟ್ಟಿ, ಸದಸ್ಯ ಗಣೇಶ್ ಹಿರಿಂಜ, ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ಸತೀಶ್ ಕುಮಾರ್ ಜಿ.ಆರ್, ಶ್ರೀರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ.ಎಂ.ಬಿ, ಶಿಬಿರಾಧಿಕಾರಿ ಕೀರ್ತನ್, ಘಟಕದ ನಾಯಕ ಅಶ್ವಥ್, ನಾಯಕಿ ಮಾನ್ಯ ಉಪಸ್ಥಿತರಿದ್ದರು.

ಪ್ರಾಂಶುಪಾಲ ಚಂದ್ರಶೇಖರ್ ಕೆ. ಸ್ವಾಗತಿಸಿದರು. ಸಹಶಿಬಿರಾಧಿಕಾರಿ ಚೈತ್ರಾ ವಂದಿಸಿದರು. ಉಪನ್ಯಾಸಕ ಚೇತನ್ ಎಂ. ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net